Friday, Feb 28 2020 | Time 09:27 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Special Share

ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿ ಶೀಘ್ರದಲ್ಲಿಯೇ ಅಂತಿಮವಾಗಲಿದೆ; ದಿನೇಶ್ ಗುಂಡೂರಾವ್

ಮೈಸೂರು, ಜ 24(ಯುಎನ್ಐ) ಇನ್ನೊಂದು ವಾರದೊಳಗೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಅಂತಿಮಗೊಳ್ಳಲಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಶುಕ್ರವಾರ ಇಲ್ಲಿ ತಿಳಿಸಿದ್ದಾರೆ
ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರು, ಎಲ್ಲರಿಗೂ ಒಪ್ಪಿಗೆಯಾಗುವಂತಹ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಸದ್ಯದಲ್ಲಿಯೇ ಕೈಗೊಳ್ಳಲಿದೆ ಎಂಬ ಆಶಯ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಸಂಪುಟ ವಿಸ್ತರಣೆ ಎಂದರೆ, ಯಾರೊ ಒಬ್ಬರಿಗೆ ಸಚಿವ ಸ್ಥಾನ ನೀಡುವುದಲ್ಲ. ಸರ್ಕಾರದ ಅಭಿವೃದ್ದಿ ಯೋಜನೆಗಳು ಜನರಿಗೆ ಸೂಕ್ತವಾಗಿ ತಲುಪುವುದನ್ನು ಖಾತ್ರಿಪಡಿಸಬೇಕು. ಇದು ಅಭಿವೃದ್ದಿಯ ಪ್ರಶ್ನೆಮಾತ್ರವಾಗಿದ್ದು, ಯಾವುದೊ ಒಂದು ಪಕ್ಷವನ್ನು ಬಲಪಡಿಸುವವುದಲ್ಲ ಎಂದರು
ಜನರ ಅಗತ್ಯಗಳಿಗೆ ಸೂಕ್ತವಾಗಿ ಪ್ರತಿಸ್ಪಂದಿಸುವ ಸಂಪುಟವನ್ನು ರಚಿಸಬೇಕು ಎಂದು ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಪ್ರಕರಣ ಒಂದು ದೊಡ್ಡ ನಾಟಕ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ .ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ದಿನೇಶ್ ಗುಂಡೂರಾವ್ ನಿರಾಕರಿಸಿದರು
ಬೆಂಗಳೂರಿನಲ್ಲಿ ಪಕ್ಷದ, ಶಾಸಕ ಹ್ಯಾರೀಸ್ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ನಡೆದ ಸ್ಪೋಟಕದ ಮೂಲಕ ದಾಳಿ ನಡೆಸಿರುವ ಘಟನೆ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಸಮಸ್ಯೆಗೆ ಈ ಹಿಂದೆ ಆಡಳಿತ ನಡೆಸಿದ ಸರ್ಕಾರಗಳೇ ಕಾರಣ ಎಂಬ ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವಥ್ ನಾರಾಯಣ ಅವರ ಹೇಳಿಕೆಯನ್ನು ಟೀಕಿಸಿದ ದಿನೇಶ್ ಗುಂಡೂರಾವ್, ಬದಲಿಗೆ ಉಪಮುಖ್ಯಮಂತ್ರಿಗಳೇ ಸಮಾಜದ ಸೌಹಾರ್ಧತೆ ಹಾಳುಗೆಡವಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಯುಎನ್ಐ ಕೆವಿಆರ್ 1827