Friday, Feb 28 2020 | Time 09:44 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಪ್ರಧಾನಿ, ಅಮಿತ್‍ಷಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಣ್ಣನ್ ನ್ಯಾಯಾಂಗ ಕಸ್ಟಡಿಗೆ

ಚೆನ್ನೈ, ಜ 2(ಯುಎನ್‍ಐ)- ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ನೀಲೈ ಕಣ್ಣನ್ ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಮಧ್ಯೆ, ಪೊಲೀಸರ ಪೂರ್ವಾನುಮತಿ ಇಲ್ಲದೆ, ಮರೀನಾದಲ್ಲಿ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲು ಯತ್ನಿಸಿದ 300ಕ್ಕೂ ಹೆಚ್ಚು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದಕುಕೊಂಡಿದ್ದಾರೆ.
ಸೆಕ್ಷನ್ 143, 145 ಹಾಗೂ 341ಗಳಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ, ರಾಜ್ಯಸಭಾ ಸದಸ್ಯ ಎಲ್.ಗಣೇಶನ್, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್, ಸಿ.ಪಿ.ರಾಧಾಕೃಷ್ಣನ್ ಮತ್ತಿತರರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ತಿರುನಲ್ವೇಲಿ ಜಿಲ್ಲೆಯಲ್ಲಿ ಎಸ್‍ಡಿಪಿಐ ಆಯೋಜಿಸಿದ್ದ ಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮುಗಿಸುವಂತೆ ಮುಸ್ಲೀಮರನ್ನು ಪ್ರಚೋದಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ತಮಿಳು ಲೇಖಕ ನೀಲೈ ಕಣ್ಣನ್ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿ ನಾಯಕರು ನಿನ್ನೆ ಧರಣಿ ನಡೆಸಿದ್ದರು.
ಕಳೆದ ರಾತ್ರಿ ಕಣ್ಣನ್ ಅವರನ್ನು ಪೆರಂಬಲೂರಿನಲ್ಲಿ ಬಂಧಿಸಿ, ತಿರುನಲ್ವೇಲಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ಕಣ್ಣನ್ ಅವರನ್ನು ಜ13ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿತ್ತು.
ಯುಎನ್‍ಐ ಎಸ್‍ಎಲ್‍ಎಸ್ 1627