Wednesday, Feb 26 2020 | Time 09:46 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಪ್ರಧಾನಿಯನ್ನು ಭೇಟಿಯಾದ ತೆಲುಗು ನಟ ಮೋಹನ್ ಬಾಬು

ವಿಜಯವಾಡ, ಜ 6 (ಯುಎನ್ಐ) ಪ್ರಖ್ಯಾತ ಚಿತ್ರನಟ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಮಾಂಚು ಮೋಹನ್ ಬಾಬು ಸೋಮವಾರ ಕುಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ತಮ್ಮ ಪುತ್ರರಾದ ವಿಷ್ಣು, ಮನೋಜ್ , ಪುತ್ರಿ ಹಾಗೂ ನಟಿ ಲಕ್ಷ್ಮೀ ಮಾಂಚು ಮತ್ತು ಸೊಸೆ ವಿರೋನಿಕಾ ಪ್ರಧಾನಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಮೋಹನ್ ಬಾಬು, ತೆಲಗು ದೇಸಂ ಪಕ್ಷದ ಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ಅವರ ಆಪ್ತರಾಗಿದ್ದಾರೆ. ನಂತರ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಪಕ್ಷ ತೊರೆದಿದ್ದರು.
ಈಗ ಮೋಹನ್ ಬಾಬು ಪ್ರಧಾನಿ ಅವರನ್ನು ಭೇಟಿಯಾಗಿರುವುದರಿಂದ ಬಿಜೆಪಿ ಸೇರ್ಪಡೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಯುಎನ್ಐ ಎಸ್ಎಚ್ 1928