Friday, Feb 28 2020 | Time 09:38 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಪೆರೇಡ್ ಗೆ ಕರ್ನಾಟಕ ಸೇರಿ 12 ರಾಜ್ಯಗಳ ಸ್ತಬ್ಧಚಿತ್ರಗಳ ಆಯ್ಕೆ

ನವದೆಹಲಿ ಜನವರಿ ,4(ಯುಎನ್ಐ) ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ನಲ್ಲಿ ಕರ್ನಾಟಕ ಸೇರಿ 12 ರಾಜ್ಯಗಳ ಸ್ತಬ್ಧಚಿತ್ರಗಳು ಆಯ್ಕೆಯಾಗಿವೆ.

ಕೇರಳ, ಪಶ್ಚಿಮಬಂಗಾಳ ಹಾಗೂ ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳ ಸ್ತಬ್ಧಚಿತ್ರವನ್ನು ರಕ್ಷಣಾ ಇಲಾಖೆ ತಿರಸ್ಕರಿಸಿದೆ.
ಈ ಬಾರಿ ಪಥಸಂಚಲನದಲ್ಲಿ ಕರ್ನಾಟಕದಿಂದ ಜಗಜ್ಯೋತಿ ಬಸವೇಶ್ವರ ಅನುಭವ ಮಂಟಪ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ.
ಸಂವಿಧಾನಕ್ಕೆ 70 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ 12ನೇ ಶತಮಾನದ ಅನುಭವ ಮಂಟಪದ ಮಾದರಿಯೇ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ತಳಪಾಯವಾಗಿದೆ ಎಂಬ ಕಾರಣಕ್ಕೆ ಇದನ್ನೇ ಆಯ್ಕೆ ಮಾಡಲಾಗಿದೆ ಸತತ 12ನೇ ಬಾರಿಗೆ ಕರ್ನಾಟಕ ಸ್ತಬ್ಧಚಿತ್ರಗಳ ಪೆರೇಡ್ನಲ್ಲಿ ಭಾಗವಹಿಸುವ ಅಪೂರ್ವ ಅವಕಾಶ ದೊರಕಿದೆ .
ಕೇರಳದ ಸ್ತಬ್ಧಚಿತ್ರ ಸತತ ಎರಡನೇ ಬಾರಿಗೆ ತಿರಸ್ಕಾರಗೊಂಡಿದೆ. ಸ್ತಬ್ಧಚಿತ್ರಗಳನ್ನು. ಥೆಯ್ಯಮ್ ಹಾಗೂ ಕಲಾಮಂಡಲ ಸಾಂಸ್ಕೃತಿಕ ಕಲೆ ಆಧರಿಸಿದ ಸ್ತಬ್ಧಚಿತ್ರ ಪ್ರಸ್ತಾವನೆಯನ್ನು ಕೇರಳ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು.
ಕೇಂದ್ರ ಈ ಕ್ರಮವನ್ನು ಟೀಕಿಸಿರುವ ಕೇರಳದ ಕಾನೂನು ಸಚಿವ ಎ.ಕೆ.ಬಾಲನ್ ಅವರು ಇದೊಂದು ರಾಜಕೀಯ ಪ್ರೇರಿತ ನಿರ್ಧಾರ ಎಂದೂ ಆಕ್ರೋಶ ಹೊರಹಾಕಿದ್ದಾರೆ.
ಯುಎನ್ಐ ಕೆಎಸ್ಆರ್ 1450