Friday, Feb 28 2020 | Time 09:50 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಪೂರ್ವ ದೆಹಲಿಯ ಕೃಷ್ಣನಗರದಲ್ಲಿ ಅಗ್ನಿ ಆಕಸ್ಮಿಕ; 40 ಜನರ ರಕ್ಷಣೆ

ನವದೆಹಲಿ, ಡಿ 26 (ಯುಎನ್ಐ) ಪೂರ್ವ ದೆಹಲಿಯ ಕೃಷ್ಣ ನಗರದ ನಾಲ್ಕು ಮಹಡಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿ ಸಿಲುಕಿದ್ದ 40 ಜನರನ್ನು ರಕ್ಷಿಸಲಾಗಿದೆ.

ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ಜನರು ತಾರಸಿಯಲ್ಲಿ ರಕ್ಷಣೆ ಪಡೆದಿದ್ದರು. ನಂತರ, ಅಗ್ನಿ ಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ. ಮಧ್ಯರಾತ್ರಿ 2 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸುಮಾರು ಐದು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಮುಂಜಾನೆ 4 ಗಂಟೆಯ ವೇಳೆಗೆ ಅಗ್ನಿಯನ್ನು ನಂದಿಸಲಾಯಿತು.

ಯುಎನ್ಐ ಎಸ್ಎಚ್ 1200