Wednesday, Feb 26 2020 | Time 10:30 Hrs(IST)
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಪುಲ್ವಾಮದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ: ಇದುವರೆಗೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ, ಓರ್ವ ಉಗ್ರ ಹತ

ಪುಲ್ವಾಮದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ: ಇದುವರೆಗೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ, ಓರ್ವ ಉಗ್ರ ಹತ
ಪುಲ್ವಾಮದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ: ಇದುವರೆಗೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ, ಓರ್ವ ಉಗ್ರ ಹತ

ಶ್ರೀನಗರ, ಜ 23(ಯುಎನ್‍ಐ)- ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಂಗಳವಾರ ಮಧ್ಯಾಹ್ನ 12ಕ್ಕೆ ಖ್ರೆವ್ ನ ಜಂತರಾಗ್ ಗ್ರಾಮದಲ್ಲಿ ಶುರುವಾದ ಗುಂಡಿನ ಚಕಮಕಿಯಲ್ಲಿ ಇದುವರೆಗೆ ಸೈನಿಕನೋರ್ವ ಮತ್ತು ಜಮ್ಮು-ಕಾಶ್ಮೀರ ಪೊಲೀಸ್ ನ ವಿಶೇಷ ಕಾರ್ಯಾಚರಣೆ ತಂಡದ ಓರ್ವ ಯೋಧ ಹತರಾಗಿದ್ದಾರೆ.

ಜಂತರಾಗ್ ಗೆ 2 ಕಿ.ಮೀ ದೂರದ ನಗ್ರಟನ್ ಗ್ರಾಮದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಈ ಪ್ರದೇಶವನ್ನು ಸುತ್ತುವರೆದಿರುವ ಭದ್ರತಾ ಪಡೆಗಳು ಇತ್ತೀಚಿನ ವರದಿ ಬರುವವರೆಗೆ ಕಾರ್ಯಾಚರಣೆ ಮುಂದುವರೆಸಿವೆ.

ಕತ್ತಲಾದ್ದರಿಂದ ನಿನ್ನೆ ತಡರಾತ್ರಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು. ಆದರೂ ಉಗ್ರರು ಪರಾರಿಯಾಗುವುದನ್ನು ತಡೆಯಲು ಕೊರೆಯುವ ಚಳಿಯಲ್ಲೂ ಭದ್ರತಾಪಡೆಗಳನ್ನು ಅದೇ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ ಬೆಳಕು ಹರಿಯುತ್ತಿದ್ದಂತೆ ಭದ್ರತಾ ಪಡೆಗಳು ಹತ್ತಿರದ ಅರಣ್ಯ ಸೇರಿದಂತೆ ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ.

ಜಂತರಗ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ನಿರ್ದಿಷ್ಟ ಮಾಹಿತಿ ಆಧರಿಸಿ ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ದಚಿಗಾಮ್ ಮತ್ತು ತ್ರಾಲ್ ಅರಣ್ಯಗಳನ್ನು ಒಳಗೊಂಡ ಖ್ರೆವ್ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದ್ದವು.

ಯುಎನ್‍ಐ ಎಸ್‍ಎಲ್‍ಎಸ್ 1259