Friday, Feb 28 2020 | Time 09:48 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಜೆಇಎಂ ಉಗ್ರರು ಹತ

ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಜೆಇಎಂ ಉಗ್ರರು ಹತ
ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಜೆಇಎಂ ಉಗ್ರರು ಹತ

ಶ್ರೀನಗರ, ಜ 21(ಯುಎನ್‍ಐ)- ದಕ್ಷಿಣ ಕಾಶ್ಮೀರ ಜಿಲ್ಲೆ ಪುಲ್ವಾಮದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಭಯೋತ್ಪಾಕರು ಹತರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯಂತೆ ರಾಷ್ಟ್ರೀಯ ರೈಫಲ್ಸ್, ಜಮ್ಮು-ಕಾಶ್ಮೀರ ಪೊಲೀಸ್ ನ ವಿಶೇಷ ಕಾರ್ಯಾಚರಣೆ ತಂಡ(ಎಸ್‍ಒಜಿ) ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಪುಲ್ವಾಮ ಜಿಲ್ಲೆಯ ಜಂತರಂಗ್ ನಲ್ಲಿ ಇಂದು ಕಾರ್ಯಾಚರಣೆ ಆರಂಭಿಸಿದ್ದವು.

ನಿರ್ದಿಷ್ಟ ಜಾಗದಲ್ಲಿ ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಪ್ರದೇಶದಲ್ಲಿ ಉಳಿದ ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ ತೀವ್ರಗೊಳಿಸಲು ಹೆಚ್ಚುವರಿ ಭದ್ರತಾಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಮೂಲಗಳು ತಿಳಿಸಿವೆ.

ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಇಬ್ಬರು ಭದ್ರತಾ ಸಿಬ್ಬಂದಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇತ್ತೀಚಿನ ವರದಿ ಬಂದಾಗ, ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆ ಸೋಮವಾರ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‍ನ ಮೂವರು ಉಗ್ರರು ಹತರಾಗಿದ್ದರು.

ಯುಎನ್‍ಐ ಎಸ್‍ಎಲ್‍ಎಸ್ 1752