Sunday, Mar 29 2020 | Time 00:51 Hrs(IST)
Special Share

ಪುಲ್ವಾಮಾ ದಾಳಿ: ಆರ್ ಡಿ ಎಕ್ಸ್ ಎಲ್ಲಿಂದ ಬಂತು, ಹೇಗೆ ಬಂತು?

ಮುಂಬೈ, ಫೆ 14 (ಯುಎನ್ಐ) ಪುಲ್ವಾಮಾ ಉಗ್ರರ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಮೃತ ಪಟ್ಟಿದ್ದಾರೆ ಆದರೆ ಸ್ಫೋಟಕ್ಕೆ ಬಳಕೆ ಮಾಡಿದ ಆರ್ಡಿಎಕ್ಸ್ ಎಲ್ಲಿಂದ ಬಂತು? ಹೇಗೆ ಬಂತು? ಎಂಬ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ .
ಇದುವರೆಗೆ ಇದರ ಬಗ್ಗೆ ತನಿಖೆ ನಡೆಸಿಲ್ಲ. ಅಲ್ಲಿಗೆ ವಾಹನ ಬಂದದ್ದು ಹೇಗೆ? ವಾಹನದ ಚಾಲಕ ಜೈಲಿನಲ್ಲಿದ್ದ. ಆದರೆ ಆತ ಹಠಾತ್ ಹೊರ ಬಂದದ್ದು ಹೇಗೆ ಎಂದು ಕೇಳಿದ್ದಾರೆ .
ದಾಳಿ ನಡೆದು ವರ್ಷ ಕಳೆದರೂ ಇನ್ನೂ ಬಹುತೇಕ ಪ್ರಶ್ನೆಗಳಿಗೆ ಉತ್ತರ ದೊರಕಿಲ್ಲ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ . ಇದನ್ನೆಲ್ಲವನ್ನು ಜನರ ಮುಂದೆ ಇರಿಸುವುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
2019ರ ಫೆ.14ರಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರನ್ನು ಜಮ್ಮುವಿನಿಂದ ಶ್ರೀನಗರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುರಂತ ಸಂಭವಿಸಿತ್ತು
ಯುಎನ್ಐ ಕೆಎಸ್ಆರ್ 1255
More News

ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ

28 Mar 2020 | 9:49 PM

 Sharesee more..
ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

28 Mar 2020 | 9:36 PM

ತಿರುಪತಿ, ಮಾ 28 (ಯುಎನ್ಐ) ಕೊರೋನಾ ವೈರಸ್ ಸೋಂಕನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ), ವಸತಿರಹಿತರ ನೆರವಿಗೆ 15 ಸಾವಿರ ಪುಳಿಯೋಗರೆ ಪೊಟ್ಟಣಗಳನ್ನು ವಿತರಿಸಿದೆ.

 Sharesee more..
ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ  ಡಿಜಿಪಿ ಪ್ರವೀಣ್ ಸೂದ್  ಮನವಿ

ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ

28 Mar 2020 | 9:22 PM

ಬೆಂಗಳೂರು, ಮಾ ೨೮(ಯುಎನ್‌ಐ) ರಾಷ್ಟ್ರೀಯ ಲಾಕ್ ಡೌನ್ ಜಾರಿಗೊಳಿಸಿರುವ ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಒದಗಿಸಲು ಬಯಸುವ ಪರೋಪಕಾರಿಗಳು ಆಹಾರವನ್ನು ಸಮೀಪದ ಪೊಲೀಸ್ ಠಾಣೆಗಳಿಗೆ ತಲುಪಿಸಿದರೆ, ಅಗತ್ಯವಿರುವ ಜನರಿಗೆ ತಲುಪಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಮನವಿ ಮಾಡಿಕೊಂಡಿದ್ದಾರೆ.

 Sharesee more..
ಕಲ್ಲಿದ್ದಲು ಸುಗಮ ಸರಬರಾಜಿಗೆ  ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

ಕಲ್ಲಿದ್ದಲು ಸುಗಮ ಸರಬರಾಜಿಗೆ ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

28 Mar 2020 | 7:27 PM

ನವದೆಹಲಿ, ಮಾ 28 (ಯುಎನ್‌ಐ) ದೇಶದಲ್ಲಿ ಕಲ್ಲಿದ್ದಲು ಸರಬರಾಜನ್ನು ಅತ್ಯಗತ್ಯ ಸೇವೆ ಎಂದು ಘೋಷಿಸಲಾಗಿದ್ದು, ಲಾಕ್‌ ಡೌನ್ ಅವಧಿಯಲ್ಲಿ ನಿರ್ಣಾಯಕ ಕಲ್ಲಿದ್ದಲು ಪೂರೈಕೆಯನ್ನು ಖಾತರಿ ಪಡಿಸಲು ಅಹರ್ನಿಶಿ ಶ್ರಮಿಸುವಂತೆ ಸಚಿವಾಲಯದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಶನಿವಾರ ನಿರ್ದೇಶನ ನೀಡಿದ್ದಾರೆ.

 Sharesee more..