Wednesday, Feb 26 2020 | Time 10:21 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಬಡ್ಗಾಮ್ ನಲ್ಲಿ ಭದ್ರತಾ ಪಡೆಗಳಿಂದ ತೀವ್ರ ಶೋಧ ಕಾರ್ಯಾಚರಣೆ ಆರಂಭ

ಶ್ರೀನಗರ್, ಜ 17 ( ಯುಎನ್‍ಐ)- ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಮಧ್ಯದ ಬಡ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.
ಭಯೋತ್ಪಾದಕರು ಅಡಗಿರುವ ನಿರ್ದಿಷ್ಟ ಮಾಹಿತಿಯಂತೆ ಪ್ರತಿಕೂಲ ಹವಾಮಾನದ ನಡುವೆಯೂ ರಾಜ್ಯ ಪೊಲೀಸರು, ಸೇನೆ ಮತ್ತು ಸಿಆರ್‍ಪಿಎಫ್ ಜಂಟಿಯಾಗಿ ಬಡ್ಗಾಮ್ ಜಿಲ್ಲೆಯ ಚದೂರ ದಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕೃತ ಮೂಲಗಳು ಯುಎನ್‍ಐಗೆ ತಿಳಿಸಿವೆ.
ಭದ್ರತಾ ಪಡೆಗಳು ಮನೆ-ಮನೆಗಳಲ್ಲಿ ಶೋಧ ನಡೆಸುತ್ತಿವೆ. ಅಲ್ಲದೆ, ಹಿಮ ಹೊದಿಕೆಯಾಗಿರುವ ಬಯಲು ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ ಎಂದು ಅವರು ಹೇಳಿದ್ದಾರೆ.
ಭಯೋತ್ಪಾದಕರು ಪರಾರಿಯಾಗದಂತೆ ಎಲ್ಲ ರಸ್ತೆಗಳನ್ನು ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ. ನಿರಂತರವಾಗಿ ಸುರಿಯುತ್ತಿರುವ ಹಿಮದಿಂದ ಅನೇಕ ಪ್ರದೇಶಗಳು ಹಿಮದಿಂದ ಆವೃತವಾಗಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದರೂ, ಭದ್ರತಾ ಪಡೆಗಳು ಇದನ್ನು ಲೆಕ್ಕಿಸದೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1405