Wednesday, Feb 26 2020 | Time 10:21 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Special Share

ಬಳ್ಳಾರಿ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆ ಪ್ರಕ್ರಿಯೆ; ಶಾಸಕ ಆನಂದ್ ಸಿಂಗ್ ಮೇಲುಗೈ

ಬಳ್ಳಾರಿ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆ ಪ್ರಕ್ರಿಯೆ; ಶಾಸಕ ಆನಂದ್ ಸಿಂಗ್   ಮೇಲುಗೈ
ಬಳ್ಳಾರಿ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆ ಪ್ರಕ್ರಿಯೆ; ಶಾಸಕ ಆನಂದ್ ಸಿಂಗ್ ಮೇಲುಗೈ

ಬಳ್ಳಾರಿ, ಜ ೨೪(ಯುಎನ್‌ಐ) ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಸಿರಗುಪ್ಪ ಹಾಗೂ ಹಡಗಲಿ ತಾಲ್ಲೊಕುಗಳನ್ನು ಒಳಗೊಂಡ ವಿಜಯನಗರ ಹೊಸ ಜಿಲ್ಲೆ ರಚನೆ ಸಂಬಂಧ ಬಳ್ಳಾರಿ ಜಿಲ್ಲಾಧಿಕಾರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ರವಾನಿಸಿದ್ದಾರೆ.

ಬಳ್ಳಾರಿ ಜಿಲ್ಲಾಧಿಕಾರಿ ಎಸ್ .ಎಸ್. ನಕುಲ್ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ಕೇಂದ್ರ ಸ್ಥಾನವನ್ನಾಗಿಸಿ ವಿಜಯ ನಗರ ಜಿಲ್ಲೆಯನ್ನು ರಚಿಸುವಂತೆ ಬಿಜೆಪಿ ಶಾಸಕ ಆನಂದ್ ಸಿಂಗ್ ಮೊದಲಿನಿಂದಲೂ ಒತ್ತಾಯಿಸಿಕೊಂಡು ಬರುತ್ತಿದ್ದಾರೆ.

ಆದರೆ, ಬಳ್ಳಾರಿ ಜಿಲ್ಲೆಯ ವಿಭಜನೆಯನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರ ಒಂದು ವರ್ಗ ತೀವ್ರವಾಗಿ ವಿರೋಧಿಸುತ್ತಿದೆ. ಪ್ರಸ್ತಾವನೆ ವಿರೋಧಿಸಲು ತಾವು ಯಾವ ಮಟ್ಟದ ಹೋರಾಟಕ್ಕೂ ಸಿದ್ದ ಎಂದು ಬಿಜೆಪಿ ಶಾಸಕ ಸೋಮಶೇಖರರೆಡ್ಡಿ ಈಗಾಗಲೇ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಕಂದಾಯ ಸಚಿವ ಆರ್ . ಅಶೋಕ, ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಳ್ಳಾರಿ ಜಿಲ್ಲೆ ವಿಭಜನೆ ಸಂಬಂಧ ಜಿಲ್ಲಾಧಿಕಾರಿ ಸಲ್ಲಿಸಿರುವ ಪ್ರಸ್ತಾವನೆ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಸಂಪುಟದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

೨೦೧೯ರ ಅಕ್ಟೋಬರ್ ನಲ್ಲಿ ಬಳ್ಳಾರಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳ ತೀವ್ರ ವಿರೋಧದ ಕಾರಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಈಸಂಬಂಧ ಕರೆದಿದ್ದ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಂದೂಡಿದ್ದರು.

ಕಳೆದ ಡಿಸೆಂಬರ್ ೫ರಂದು ನಡೆದ ವಿಜಯನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆನಂದ್ ಸಿಂಗ್ ಬಿಜೆಪಿಯಿಂದ ಮರು ಆಯ್ಕೆಗೊಂಡಿದ್ದಾರೆ.

ಇತ್ತೀಚಿಗೆ ನಡೆದ ಹಂಪಿ ಉತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಎದುರೇ ಪ್ರತ್ಯೇಕ ವಿಜಯ ನಗರ ಜಿಲ್ಲೆ ರಚನೆಯ ಬೇಡಿಕೆಯನ್ನು ಮರು ಪ್ರಸ್ತಾಪಿಸಿದ ಶಾಸಕ ಆನಂದ್ ಸಿಂಗ್, ತಮಗೆ ಸಚಿವ ಸ್ಥಾನಕ್ಕಿಂತ ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಯೇ ಆದ್ಯತೆಯಾಗಿದ್ದು, ಈ ಸಂಬಂಧ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಯುಎನ್‌ಐ ಕೆವಿಆರ್ ೧೨೩೯