Friday, Feb 28 2020 | Time 09:52 Hrs(IST)
  • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Sports Share

ಬಾಂಗ್ಲಾ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಾಕ್

ಲಾಹೋರ್, ಜ.24 (ಯುಎನ್ಐ)- ಮಾಜಿ ನಾಯಕ ಶೋಯೆಬ್ ಮಲಿಕ್ (ಅಜೇಯ 58) ಅವರ ಅರ್ಧಶತಕದ ಬಲದಿಂದ ಪಾಕಿಸ್ತಾನ ಶುಕ್ರವಾರ ನಡೆದ ಮೊದಲ ಟಿ 20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಐದು ವಿಕೆಟ್‌ಗಳಿಂದ ಮಣಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

ಬಾಂಗ್ಲಾದೇಶ 20 ಓವರ್‌ಗಳಲ್ಲಿ ಐದು ವಿಕೆಟ್‌ಗೆ 141 ರನ್ ಗಳಿಸಿದರೆ, ಪಾಕಿಸ್ತಾನ 19.3 ಓವರ್‌ಗಳಲ್ಲಿ ಐದು ವಿಕೆಟ್‌ಗೆ 142 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು. ಮಲಿಕ್ 45 ಎಸೆತಗಳಲ್ಲಿ ಐದು ಬೌಂಡರಿಗಳ ಸಹಾಯದಿಂದ ಅಜೇಯ 58 ರನ್‌ ಬಾರಿಸಿ ಗೆಲುವಿನಲ್ಲಿ ಮಿಂಚಿದರು. ಪರಿಣಾಮ ಇವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು.

ಮಲಿಕ್ ಅವರಲ್ಲದೆ ಆರಂಭಿಕರಾದ ಎಹ್ಸಾನ್ ಅಲಿ 32 ಎಸೆತಗಳಲ್ಲಿ ನಾಲ್ಕು ಬೌಂಡರಿಗಳೊಂದಿಗೆ 36 ರನ್ ಗಳಿಸಿದರು, ಮೊಹಮ್ಮದ್ ಹಫೀಜ್ 17 ಮತ್ತು ಇಫ್ತಿಖರ್ ಅಹ್ಮದ್ 16 ರನ್ ಗಳಿಸಿದರು. ಬಾಂಗ್ಲಾದೇಶದ ಪರ ಶಫೀಲ್ ಇಸ್ಲಾಂ 27 ರನ್ ಗಳಿಸಿ ಎರಡು ವಿಕೆಟ್ ಪಡೆದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಬಾಂಗ್ಲಾದೇಶದ ಪರ ಆರಂಭಿಕ ಆಟಗಾರ ತಮೀಮ್ ಇಕ್ಬಾಲ್ 34 ಎಸೆತಗಳಲ್ಲಿ 39, ಮೊಹಮ್ಮದ್ ನಯೀಮ್ 41 ಎಸೆತಗಳಲ್ಲಿ 43, ಲಿಟ್ಟನ್ ದಾಸ್ 12 ಮತ್ತು ನಾಯಕ ಮಹಮ್ಮದುಲ್ಲಾ ಅಜೇಯ 19 ರನ್ ಗಳಿಸಿದರು. ಪಾಕಿಸ್ತಾನ ಪರ ಶಾಹಿನ್ ಅಫ್ರಿದಿ, ಹರಿಸ್ ರವೂಫ್ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದರು.

ಯುಎನ್ಐ ವಿಎನ್ಎಲ್ 1847
More News
ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ

ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ

27 Feb 2020 | 8:25 PM

ನವದೆಹಲಿ, ಫೆ.27 (ಯುಎನ್ಐ)- ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡು ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಸ್ಟಾರ್ ಬೌಲರ್ ಇಶಾಂತ್ ಶರ್ಮಾ ಬಿಗುವಿನ ದಾಳಿ ನಡೆಸಿ ಗಮನ ಸೆಳೆದಿದ್ದರು. ಶನಿವಾರದಿಂದ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತೊಂದು ಮೈಲುಗಲ್ಲು ತಲುಪುವ ಕನಸಿನಲ್ಲಿದ್ದಾರೆ.

 Sharesee more..

ತಂಡದ ಲಯ ಮುಂದುವರೆಸುವ ಅವಶ್ಯಕತೆ ಇದೆ: ತಾನಿಯಾ

27 Feb 2020 | 7:26 PM

 Sharesee more..

ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ ಜೊಕೊವಿಚ್

27 Feb 2020 | 7:08 PM

 Sharesee more..