Friday, Feb 28 2020 | Time 09:44 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ? ಜ 20ರಂದು ಚುನಾವಣೆಗೆ ವೇದಿಕೆ ಸಜ್ಜು

ನವದೆಹಲಿ, ಜ 17 (ಯುಎನ್‌ಐ) ಬಿಜೆಪಿ ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದ್ದು, ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವರ ಹೆಗಲಿಗೆ ಜೆ ಪಿ ನಡ್ಡಾ ಸಾರಥ್ಯ
ವಹಿಸುವ ಎಲ್ಲಾ ಸಾಧ್ಯತೆಗಳೂ ದಟ್ಟವಾಗಿವೆ

ಪಕ್ಷದ ಮುಖ್ಯಸ್ಥರ ಆಯ್ಕೆ ನಾಮನಿರ್ದೇಶನ ಪ್ರಕ್ರಿಯೆಯನ್ನು ಜನವರಿ 20 ರಂದು ನಿಗದಿಪಡಿಸಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮತ್ತು ಪಕ್ಷದ ರಾಷ್ಟ್ರೀಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಇಲ್ಲಿ ಪ್ರಕಟಿಸಿದ್ದಾರೆ.

ವೇಳಾಪಟ್ಟಿಯ ಪ್ರಕಾರ, ಜ 20ರಂದು ಬೆಳಗ್ಗೆ 10 ರಿಂದ 12.30ರ ವರೆಗೆ ನಾಮಪತ್ರ ಸಲ್ಲಿಕೆಯಿದ್ದು, 01.30ರೊಳಗೆ ಪರಿಶೀಲನೆ ನಡೆಯಲಿದೆ. 01.30 ರಿಂದ 02.30ರ ವರೆಗೆ ನಾಮಪತ್ರ ವಾಪಸ್ ಪಡೆಯುಲು ಅವಕಾಶವಿದೆ. ಅಗತ್ಯಬಿದ್ದಲ್ಲಿ ಜ 21ರಂದು ಚುನಾವಣೆ ನಡೆಸಲಾಗುವುದು ಎಂದು ರಾಧಾ ಮೋಹನ್ ಸಿಂಗ್ ತಿಳಿಸಿದ್ದಾರೆ.
ಪ್ರಸ್ತುತ ಬಿಜೆಪಿ ಅಧ್ಯಕ್ಷರಾಗಿರುವ ಅಮಿತ್ ಶಾ 2014ರಲ್ಲಿ ಪ್ರಸ್ತುತ ರಕ್ಷಣಾ ಸಚಿವರಾಗಿರುವ ರಾಜನಾಥ್ ಸಿಂಗ್ ಅವರಿಂದ ಜವಾಬ್ದಾರಿ ಸ್ವೀಕರಿಸಿದ್ದರು.

ಯುಎನ್‍ಐ ಎಸ್‍ಎ ವಿಎನ್ 1928