Wednesday, Feb 26 2020 | Time 10:48 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
Karnataka Share

ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರ ಬಳಸಲು ಮುಂದಾದ ರಾಜ್ಯ ಕೈ ನಾಯಕರು!

ಬೆಂಗಳೂರು,ಜ 24(ಯುಎನ್ಐ)ಬಿಜೆಪಿ ವಿರುದ್ಧ ನಿರುದ್ಯೋಗ‌ ಸಮಸ್ಯೆ ಮುಂದಿಟ್ಟುಕೊಂಡು ಹೋರಾಟ ನಡೆಸಲು ಇದೀಗ ರಾಜ್ಯ ಕಾಂಗ್ರೆಸ್ ಮುಂದಾಗಿದೆ‌.

ಈ ಸಂಬಂಧ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಹೋರಾಡಲು ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಟ್ವಿಟರ್, ಮಿಸ್ಡ್ ಕಾಲ್ ಮೂಲಕ ಅಭಿಯಾನ ನಡೆಸಲು ಕೈ ನಾಯಕರು ನಿರ್ಧರಿಸಿದ್ದಾರೆ. ಆ ಮೂಲಕ ಮೋದಿ ಸರ್ಕಾರಕ್ಕೆ ಟಾಂಗ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ.

ಸಿಎಎ ಜಾರಿಗೆ ನಿರ್ಧರಿಸಿರುವ ಬಿಜೆಪಿ ಅದರ ಪರ ಮಿಸ್ಡ್ ಕಾಲ್ ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್, ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಬಗ್ಗೆ ಮನದಟ್ಟು ಮಾಡಲು ದೇಶ, ರಾಜ್ಯದಲ್ಲಿನ ನಿರುದ್ಯೋಗಿಗಳ ಮಾಹಿತಿ ಸಂಗ್ರಹಿಸಲು ಈ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ‌.

ಆ ಮೂಲಕ ನಿರುದ್ಯೋಗ ನೋಂದಣಿ ಅಭಿಯಾನ ಆರಂಭಿಸಲಿದೆ. ದೇಶದಲ್ಲಿರುವ ನಿರುದ್ಯೋಗಿಗಳಿಂದ 8151994411 ನಂಬರ್ ಗೆ ಮಿಸ್ ಕಾಲ್‌ ಕೊಡುವ ಅಭಿಯಾನ ಶುರು ಮಾಡಿದೆ. ಈ ಮೂಲಕ ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರವನ್ನು ಮುಂದಿಟ್ಟು ಹೋರಾಟ ನಡೆಸಲಿದೆ.

ಆರ್ಥಿಕ ಹಿಂಜರಿತದಿಂದ ದೇಶ, ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಇದರ ವಿರುದ್ಧ ದನಿ ಎತ್ತೋಣ ಎಂಬ ಮೂಲಕ ತಮ್ಮ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ.

ಯುಎನ್ಐ ಎಸ್ಎಂಆರ್ ವಿಎನ್ 1930