Monday, Jul 22 2019 | Time 07:11 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
National Share

ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕರಿಗೆ ನಾಳೆ ಮಂತ್ರಿ ಯೋಗ !

ಪಣಜಿ, ಜುಲೈ 12 (ಯುಎನ್‌ಐ) ಬಿಜೆಪಿ ರಾಷ್ಟ್ರೀಯ ಕಾರ್ಯಾದ್ಯಕ್ಷ ಜೆ ಪಿ ನಡ್ಡಾ ಅವರ ಸಮ್ಮುಖದಲ್ಲಿ ವಿದ್ಯುಕ್ತ ವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಹತ್ತು ಕಾಂಗ್ರೆಸ್ ಶಾಸಕರು ಶುಕ್ರವಾರ ಗೋವಾಕ್ಕೆ ಆಗಮಿಸಿದ್ದು, ಅದರಲ್ಲಿ ಕೆಲವರಿಗೆ ನಾಳೆ ಮಂತ್ರಿಯಾಗುವ ಯೋಗ ಲಭಿಸಲಿದೆ.
ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ರಾಜ್ಯದ ಹಿತದೃಷ್ಟಿಯಿಂದ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ ಮತ್ತು ಅದನ್ನು ಲಘುವಾಗಿ ಪರಿಗಣಿಸಬಾರದು ಎಂದು ಉಪ ಸಭಾಧ್ಯಕ್ಷ ಮೈಕಲ್ ಲೋಬೋ ಅವರು ಸುದ್ದಿಗಾರರಿಗೆ ತಿಳಿಸಿದರು. ಶನಿವಾರ ಹೊಸ ಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಅವರು ಹೇಳಿದರು.

ರಾಜ್ಯ ವಿಧಾನಸಭೆಯಲ್ಲಿ ಕ್ಯಾಲಂಗುಟ್ ಕ್ಷೇತ್ರವನ್ನು ಪ್ರತಿನಿಧಿಸುವ ಲೋಬೊ ಅವರ ಪ್ರಕಾರ, ಕೆಲವು ಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಮುಖ್ಯಮಂತ್ರಿ ಸಂತೋಷವಾಗಿರಲಿಲ್ಲ.
ಈ ನಡುವೆ ಮಾಜಿ ವಿರೋಧ ಪಕ್ಷದ ನಾಯಕ ಚಂದ್ರಕಾಂತ್ 'ಬಾಬು' ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ಮಾಡಿದ್ದಾರೆ.
ಆದರೆ, ಪ್ರಮೋದ್ ಸಾವಂತ್ ನೇತೃತ್ವದ ಸರ್ಕಾರಕ್ಕೆ ಕೆಲವು ಶಾಸಕರು ಸಹ ಹೊಸದಾಗಿ ಮಂತ್ರಿಯಾಗಿ ಸೇರ್ಪಡೆಯಾಗುವ ಸಂಭವವಿದೆ
10 ಕಾಂಗ್ರೆಸ್ ಶಾಸಕರು ಬುಧವಾರ ನಾಟಕೀಯ ಬೆಳವಣಿಯಲ್ಲಿ ಪಕ್ಷ ತೊರೆದು ದೆಹಲಿಯಲ್ಲಿ ಬಿಜೆಪಿ ಸೇರಿದ್ದರು.
ಯುಎನ್‌ಐ ಕೆಎಸ್ಆರ್ ಎಎಚ್ 1228