Sunday, Mar 29 2020 | Time 00:36 Hrs(IST)
National Share

ಬಂಧಿಖಾನೆಗಳ ಖಾಲಿ ಹುದ್ದೆಗಳ ಭರ್ತಿ ಕುರಿತು ವಿವರ ಸಲ್ಲಿಸಿ; ಕೇಂದ್ರಕ್ಕೆ ಸುಪ್ರೀಂ ಸೂಚನೆ

ನವದೆಹಲಿ, ಫೆ 5 (ಯುಎನ್ಐ) ದೇಶಾದ್ಯಂತ ಜೈಲುಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ವಿಸ್ತೃತ ವಿವರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚಿಸಿದೆ.
ದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚು ಕೈದಿಗಳಿರುವ ಜೈಲುಗಳು ಹಾಗೂ ಜೈಲು ಸಿಬ್ಬಂದಿಯ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ವಿಸ್ತೃತ ವಿವರ ಬಯಸುತ್ತಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ತಿಳಿಸಿದೆ.
ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚಳಕ್ಕೆ ನ್ಯಾಯಾಲಯಗಳ ವಿಳಂಬ ಪ್ರಕ್ರಿಯೆಗಳೇ ಕಾರಣ ಎಂಬುದನ್ನು ಒಪ್ಪಿಕೊಂಡ ನ್ಯಾಯಪೀಠ, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.
ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನ್ಯಾಯಪೀಠ ಭರವಸೆ ನೀಡಿತು.
ಯುಎನ್ಐ ಎಸ್ಎಚ್ 1815
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..