Sunday, Mar 29 2020 | Time 00:36 Hrs(IST)
National Share

ಬಾಲಾಕೋಟ್ ವಾಯುದಾಳಿಗೆ ವರ್ಷ - ಕೆಲವೆಡೆ ವಿಜಯೋತ್ಸವ

ನವದೆಹಲಿ, ಫೆ 26 (ಯುಎನ್ಐ) ಕಳೆದ ಲೋಕಸಭಾ ಚುನಾವಣೆಗೂ ಮುನ್ನ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ನಡೆಸಿದ ದಾಳಿಗೆ ಇಂದು ವರ್ಷ ತುಂಬಿದೆ.
ವಾಯುಪಡೆಯ ಧೈರ್ಯ, ಸಾಹಸವನ್ನು ಎಲ್ಲೆಡೆ ಕೊಂಡಾಡಲಾಗುತ್ತಿದೆ. ದೇಶದ ಕೆಲವೆಡೆ ವಿಜಯೋತ್ಸವ ಸಹ ಆಚರಿಸಲಾಗುತ್ತಿದೆ.
ಪಾಕಿಸ್ತಾನದ ಬಾಲಾಕೋಟ್‌ನ ಖೈಬರ್ ಪಕ್ತುಖ್ವಾ ಪಾಂತ್ಯದಲ್ಲಿ ಭಯೋತ್ಪಾದಕರ ತರಬೇತಿ ಕೇಂದ್ರಗಳ ಮೇಲೆ ಕಳೆದ ಫೆಬ್ರವರಿ ೨೬ ರಂದು ಭಾರೀ ಪ್ರಮಾಣದಲ್ಲಿ ವಾಯುದಾಳಿ ನಡೆಸಲಾಗಿತ್ತು.
ಈ ದಾಳಿಯಲ್ಲಿ ಬಾರಿ ಸಂಖ್ಯೆಯ ಜೈಷ್ ಎ ಮೊಹಮ್ಮದ್ ಭಯೋತ್ಪಾದಕರು, ತರಬೇತುದಾರರು, ಹಿರಿಯ ಕಮಾಂಡರ್‌ಗಳು ಹಾಗೂ ಆತ್ಮಾಹುತಿಗಾಗಿ ತರಬೇತಿ ಪಡೆಯುತ್ತಿದ್ದ ಜಿಹಾದಿ ಗುಂಪುಗಳನ್ನು ನಿರ್ಮೂಲನೆ ಮಾಡಲಾಗಿತ್ತು.
ಅದೇ ದಿನ ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಚಿರುವಿನಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ , ದೇಶ ಈಗ ಸುರಕ್ಷಿತ ಕೈಗಳಲ್ಲಿದೆ ಎಂದಿದ್ದರು.
ಲೋಕಸಭಾ ಚುನಾವಣೆಗೂ ಮುನ್ನ ನಡೆಸಿದ ಈ ದಾಳಿಯ ಬಗ್ಗೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಚುನಾವಣಾ ಉದ್ದೇಶದಿಂದ ಈ ದಾಳಿ ನಡೆಸಲಾಗಿತ್ತು ಎಂದು ಆರೋಪಿಸಿದ್ದವು. ಆದರೆ ಬಿಜೆಪಿ ನಾಯಕರು ಈ ಆರೋಪವನ್ನು ಅಲ್ಲಗಳೆದಿದ್ದರು.
ಯುಎನ್ಐ ವಿಎನ್ 0821
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..