Wednesday, Feb 26 2020 | Time 10:35 Hrs(IST)
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

ಬಾಳಠಾಕ್ರೆ ಅವರಿಗೆ ಪ್ರಧಾನಿ ಶ್ರದ್ಧಾಂಜಲಿ: ಶಿವಸೇನೆ, ಎಂಎನ್‍ಎಸ್ ನಿಂದ ಪ್ರತ್ಯೇಕ ಸಭೆಗಳ ಆಯೋಜನೆ

ನವದೆಹಲಿ, ಜ23(ಯುಎನ್‍ಐ)- ಶಿವಸೇನಾ ಸ್ಥಾಪಕ ಬಾಳಠಾಕ್ರೆ ಅವರಿಗೆ ಪ್ರಧಾನಿ ನರೇಂದ್ರಮೋದಿ ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದ್ದು, ಠಾಕ್ರೆಯವರ ಧೈರ್ಯ ಮತ್ತು ದಿಟ್ಟತನ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದೆ ಎಂದು ಬಣ್ಣಿಸಿದ್ದಾರೆ.
‘ಬಾಳಸಾಹೇಬ್ ಠಾಕ್ರೆ ಅವರ ಜನ್ಮದಿನದ ಅಂಗವಾಗಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇನೆ. ಧೈರ್ಯ ಮತ್ತು ದಿಟ್ಟತನದ ಅವರು ಸಾರ್ವಜನಿಕ ಕಲ್ಯಾಣ ವಿಷಯಗಳನ್ನು ಎತ್ತುವುದಕ್ಕೆ ಎಂದಿಗೂ ಹಿಂದೆ ಮುಂದೆ ನೋಡುತ್ತಿರಲಿಲ್ಲ.’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
‘ದಿವಂಗತ ಠಾಕ್ರೆ, ಭಾರತೀಯ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದ್ದರು. ಅವರು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಲೇ ಇದ್ದಾರೆ.’ ಎಂದು ಪ್ರಧಾನಿ ಹೇಳಿದ್ದಾರೆ.
1926ರ ಜ 23ರಂದು ಜನಿಸಿದ ಬಾಳಠಾಕ್ರೆ ಅವರು 2012ರ ನವೆಂಬರ್ 17ರಂದು ಕೊನೆಯುಸಿರೆಳೆದಿದ್ದರು.
ಈ ಮಧ್ಯೆ, ಬಾಳಠಾಕ್ರೆ ಅವರ ಜನ್ಮ ವಾರ್ಷಿಕಾಚರಣೆ ಅಂಗವಾಗಿ ಶಿವಸೇನೆ ಮತ್ತು ಮಹಾರಾಷ್ಟ್ರ ನವ ನಿರ್ಮಾಣ ಸೇನೆ(ಎಂಎನ್‍ಎಸ್) ಪ್ರತ್ಯೇಕವಾಗಿ ಶ್ರದ್ಧಾಂಜಲಿ ಸಭೆಗಳನ್ನು ಆಯೋಜಿಸಿವೆ.
ಯುಎನ್‍ಐ ಎಸ್‍ಎಲ್‍ಎಸ್ 1211