Monday, Aug 3 2020 | Time 23:35 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Karnataka Share

ಭಾನುವಾರದ ಲಾಕ್‌ಡೌನ್‌ ಬಹುತೇಕ ಯಶಸ್ವಿ: ಜನಜೀವನ ಸ್ತಬ್ಧ

ಬೆಂಗಳೂರು, ಜು.5 (ಯುಎನ್ಐ) ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ ಭಾನುವಾರ ಲಾಕ್‌ಡೌನ್‌ಗೆ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವೆಡೆ ಜನರು ಮನೆಯಿಂದ ಹೊರಬಂದು ವಾಹನಗಳಲ್ಲಿ ಸಂಚರಿಸುತ್ತಿದ್ದ ದೃಶ್ಯ ಕಂಡುಬಂದಿದೆ.
ರಾಜಧಾನಿ ಬೆಂಗಳೂರು, ಮಂಗಳೂರು, ಬೆಳಗಾವಿ, ಬೀದರ್, ಕಲಬುರ್ಗಿ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ಉತ್ತರ ಕನ್ನಡ, ಹಾಸನ, ಕೊಡಗು ಸೇರಿದಂತೆ ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಸಂಪೂರ್ಣ ಸ್ಥಗಿತಗೊಂಡಿದೆ. ಬೆಳಗ್ಗೆ ಜನರು ಹಾಲು ಖರೀದಿಸಲು ಮನೆಯಿಂದ ಹೊರಗೆ ಬಂದಿದ್ದರು. ದಿನನಿತ್ಯ ವಾಹನ ಸಂಚಾರದಿಂದ ತುಂಬಿ ತುಳುಕುತ್ತಿದ್ದ ಪ್ರಮುಖ ರಸ್ತೆಗಳು‌ ಬಿಕೋ ಎನ್ನುತ್ತಿವೆ. ಹಾಲು , ಮೆಡಿಕಲ್ , ಆಸ್ಪತ್ರೆ ಹೊರತುಪಡಿಸಿ ಬಹುತೇಕ ಎಲ್ಲ ಬಂದ್ ಆಗಿದೆ.
ನಿನ್ನೆ ರಾತ್ರಿ 8 ಗಂಟೆಯಿಂದಲೇ ಲಾಕ್‌ಡೌನ್ ಜಾರಿಯಲ್ಲಿದ್ದು, ರಾಜಧಾನಿ ಬೆಂಗಳೂರಿನಿಂದ ನಿನ್ನೆ ಮಧ್ಯಾಹ್ನದಿಂದಲೇ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದ ದೃಶ್ಯಕಂಡುಬಂತು. ಇದರಿಂದ ನಗರದ ಹಲವೆಡೆ ವಾಹನ ದಟ್ಟಣೆ ಉಂಟಾಗಿತ್ತು. ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಇರಲಿದೆ.
ಯುಎನ್ಐ ಎಎಚ್ 1130