Sunday, Mar 29 2020 | Time 00:37 Hrs(IST)
National Share

ಭಾರತ-ಬ್ರೆಜಿಲ್ ನಡುವೆ ತೈಲ, ನೈಸರ್ಗಿಕ ಅನಿಲ ಕ್ಷೇತ್ರದಲ್ಲಿ ಒಡಂಬಡಿಕೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ನವದೆಹಲಿ, ಜ 22(ಯುಎನ್‍ಐ)- ಭಾರತ-ಬ್ರೆಜಿಲ್ ನಡುವೆ ತೈಲ ಮತ್ತು ನೈಸರ್ಗಿಕ ಅನಿಲ ವಲಯಗಳಲ್ಲಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಸಚಿವ ಸಂಪುಟ ಸಭೆ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಸುದ್ದಿಗಾರರೊಂದಿಗೆ ಸಭೆಯ ವಿವರಗಳನ್ನು ನೀಡಿ, ತಿಳಿವಳಿಕೆ ಒಪ್ಪಂದದಿಂದ ಎರಡೂ ದೇಶಗಳ ನಡುವೆ ತೈಲ ಮತ್ತು ನೈಸರ್ಗಿಕ ಅನಿಲ ವಲಯದಲ್ಲಿ ಸಹಕಾರ ಹೆಚ್ಚಾಗಲಿದೆ. ಭಾರತ ಮತ್ತು ಬ್ರೆಜಿಲ್‍ನಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ಅನ್ವೇಷಣೆ ಮತ್ತು ಉತ್ಪಾದನೆ ಕುರಿತಂತೆ ಸಹಕಾರ ಏರ್ಪಡಲು ಎರಡೂ ದೇಶಗಳು ಕೆಲಸ ಮಾಡಲಿವೆ.
ಅಲ್ಲದೆ, ಈ ಕ್ಷೇತ್ರದಲ್ಲಿ ಸಂಶೋಧನೆ, ಇಂಧನ ಕಾರ್ಯಕ್ಷಮತೆ, ಇಂಧನ ವಲಯದಲ್ಲಿ ಮೂಲಸೌಕರ್ಯ ವೃದ್ಧಿ, ಇಂಧನ ನೀತಿಗಳು ಸೇರಿದಂತೆ ವಿವಿಧ ವಿಷಯಗಳಲ್ಲಿ ಭಾರತ ಮತ್ತು ಬ್ರೆಜಿಲ್ ಕೆಲಸ ಮಾಡಲಿವೆ ಎಂದು ಅವರು ಹೇಳಿದ್ದಾರೆ.
ಈ ತಿಂಗಳ ಅಂತ್ಯದಲ್ಲಿ ಬ್ರೆಜಿಲ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುವ ವೇಳೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ.
ಯುಎನ್‍ಐ ಎಸ್‍ಎಲ್‍ಎಸ್ 1707
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..