Friday, Oct 30 2020 | Time 07:29 Hrs(IST)
National Share

ಭಿವಾಂಡಿ ಕಟ್ಟಡ ಕುಸಿತ ಪ್ರಕರಣ: ಪ್ರಧಾನಿ ಸಂತಾಪ

ನವದೆಹಲಿ, ಸೆ 21 (ಯುಎನ್‍ಐ) ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡ ಕುಸಿದು ಪ್ರಾಣಹಾನಿ ಸಂಭವಿಸಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡ ಕುಸಿದಿದ್ದರಿಂದ ಬೇಸರವಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪ. ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆಯಿದೆ. ಪಾರುಗಾಣಿಕಾ ಕಾರ್ಯಾಚರಣೆ ನಡೆಯುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ಮೂರು ಅಂತಸ್ತಿನ ಕಟ್ಟಡ ಕುಸಿದ ನಂತರ ಏಳು ಮಕ್ಕಳು ಮತ್ತು ಇತರ ಮೂವರು ಸಾವನ್ನಪ್ಪಿದ್ದಾರೆ ನಾಲ್ಕು ವರ್ಷದ ಬಾಲಕ ಸೇರಿದಂತೆ 11 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹತ್ತು ಮಂದಿ ಅವಶೇಷಗಳ ನಡುವೆ ಸಿಲುಕಿರುವ ಭೀತಿಯಿದ್ದು, ಶೋಧಕಾರ್ಯ ನಡೆಯುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಯುಎನ್‍ಐ ಎಸ್‍ಎ 1214
More News
ಮಹಾಮೈತ್ರಿ ಮಾತ್ರ ಬಿಹಾರದ ಜನತೆಗೆ ಉತ್ತಮ ಭವಿಷ್ಯ ನೀಡಬಲ್ಲದು; ರಾಹುಲ್‌

ಮಹಾಮೈತ್ರಿ ಮಾತ್ರ ಬಿಹಾರದ ಜನತೆಗೆ ಉತ್ತಮ ಭವಿಷ್ಯ ನೀಡಬಲ್ಲದು; ರಾಹುಲ್‌

29 Oct 2020 | 8:43 PM

ನವದೆಹಲಿ, ಅ 29 (ಯುಎನ್ಐ) ಬಿಹಾರದ ಜನತೆಗೆ ಬದಲಾವಣೆ ಬೇಕು ಮತ್ತು ಮಹಾಮೈತ್ರಿ ಮಾತ್ರ ರಾಜ್ಯದ ಜನತೆಗೆ ಉತ್ತಮ ಭವಿಷ್ಯ ಖಾತರಿಪಡಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುರುವಾರ ಹೇಳಿದ್ದಾರೆ.

 Sharesee more..
ಪರಿಸರಸ್ನೇಹಿ ಕಟ್ಟಡಗಳ ನಿರ್ಮಾಣಕ್ಕಿದು ಸುಸಮಯ: ಉಪ ರಾಷ್ಟ್ರಪತಿ

ಪರಿಸರಸ್ನೇಹಿ ಕಟ್ಟಡಗಳ ನಿರ್ಮಾಣಕ್ಕಿದು ಸುಸಮಯ: ಉಪ ರಾಷ್ಟ್ರಪತಿ

29 Oct 2020 | 5:57 PM

ನವದೆಹಲಿ, ಅ 29 (ಯುಎನ್ಐ) ದೇಶದಲ್ಲಿ ಇನ್ನು ಮುಂದೆ ನಿರ್ಮಾಣವಾಗು ಹೊಸ ಕಟ್ಟಡಗಳನ್ನು ಕಡ್ಡಾಯವಾಗಿ ಹಸಿರು ಮತ್ತು ಪರಿಸರ ಸ್ನೇಹಿಯಾಗಿಸುವ ಸಮಯ ಬಂದಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಹೇಳಿದ್ದಾರೆ.

 Sharesee more..

ಒಂದು ಕೆಜಿ ಅಸ್ಸಾಂ ಚಹಾ 75,000 ರೂ ಗೆ ಮಾರಾಟ !

29 Oct 2020 | 5:51 PM

 Sharesee more..