Wednesday, Feb 26 2020 | Time 10:44 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಮಗಳಿಗೆ ನ್ಯಾಯ ಸಿಕ್ಕಿದೆ; ನಿರ್ಭಯಾಳ ತಾಯಿ ನಿಟ್ಟುಸಿರು

ಮಗಳಿಗೆ ನ್ಯಾಯ ಸಿಕ್ಕಿದೆ; ನಿರ್ಭಯಾಳ ತಾಯಿ ನಿಟ್ಟುಸಿರು
ಮಗಳಿಗೆ ನ್ಯಾಯ ಸಿಕ್ಕಿದೆ; ನಿರ್ಭಯಾಳ ತಾಯಿ ನಿಟ್ಟುಸಿರು

ನವದೆಹಲಿ, ಜ 7, (ಯುಎನ್ಐ) ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಿಗೆ ನಗರ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ, 2012 ರ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿ ಆಶಾ ದೇವಿ ತಮ್ಮ ಮಗಳಿಗೆ ನ್ಯಾಯ ದೊರೆತಿದ್ದು, ಈ ತೀರ್ಪು ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಈ ಆದೇಶವನ್ನು ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಘೋಷಿಸಿದ್ದು, ಅದರ ಪ್ರಕಾರ ಮುಕೇಶ್, ವಿನಯ್ ಶರ್ಮಾ, ಅಕ್ಷಯ್ ಸಿಂಗ್ ಮತ್ತು ಪವನ್ ಗುಪ್ತಾ ಎಂಬ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದೆ. ಜನವರಿ 22 ರಂದು ತಿಹಾರ್ ಜೈಲಿನಲ್ಲಿ ಬೆ.7 ಗಂಟೆಗೆ ಮರಣದಂಡನೆ ಶಿಕ್ಷೆ ಜಾರಿಯಾಗಲಿದೆ. ಈ ನಿಟ್ಟಿನಲ್ಲಿ ಅಪರಾಧಿಗಳಿಗೆ ಕಾನೂನು ಪರಿಹಾರಕ್ಕಾಗಿ 14 ದಿನಗಳ ಕಾಲಾವಕಾಶವಿದೆ ಎಂದು ನ್ಯಾಯಾಧೀಶರು ತನ್ನ ತೀರ್ಪಿನಲ್ಲಿ ತಿಳಿಸಿದ್ದಾರೆ.

ಆರು ಅಪರಾಧಿಗಳಲ್ಲಿ ಒಬ್ಬ ಕೃತ್ಯ ನಡೆದಾಗ ಕೇವಲ 18 ಕ್ಕಿಂತ ಕಡಿಮೆ ವಯಸ್ಸಿನವನಾಗಿದ್ದ. ಆತ ಬಾಲಾಪರಾಧಿಯಾಗಿದ್ದು, ಮೂರು ವರ್ಷಗಳ ನಂತರ ರಿಮ್ಯಾಂಡ್ ಹೋಂನಿಂದ ಬಿಡುಗಡೆ ಹೊಂದಿದ್ದ. ಇನ್ನೊಬ್ಬ ರಾಮ್ ಸಿಂಗ್ ಜೈಲಿನಲ್ಲಿ ನೇಣು ಹಾಕಿಕೊಂಡಿದ್ದ. ನಾಲ್ವರು ಅಪರಾಧಿಗಳ ವಿರುದ್ಧ 'ಬ್ಲ್ಯಾಕ್ ವಾರೆಂಟ್' ಹೊರಡಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಇಂದು ಅಂಗೀಕರಿಸಿದ್ದು, ಅಪರಾಧಿಗಳನ್ನು ಜನವರಿ 22 ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸಲಾಗುವುದು ಎಂದು ಅದು ತೀರ್ಪು ನೀಡಿದೆ.

2012 ರ ಡಿಸೆಂಬರ್ 12ರ ರಾತ್ರಿ, 23 ವರ್ಷದ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಚಲಿಸುವ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹೊಡೆದು ಚಿತ್ರಹಿಂಸೆ ನೀಡಲಾಗಿತ್ತು. ನಂತರ ಆರು ಜನರೂ ಸೇರಿ ಆಕೆಯನ್ನು ಬಸ್ ನಿಂದ ರಸ್ತೆಬದಿಗೆ ಎಸೆದಿದ್ದರು. ಕೆಲವು ದಿನಗಳ ಜೀವನ್ಮರಣದ ಹೋರಾಟದ ನಂತರ ಸಂತ್ರಸ್ತೆ ನಿರ್ಭಯಾಳನ್ನು ದೆಹಲಿಯಿಂದ ಸಿಂಗಾಪುರಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಅಲ್ಲಿ ಆಕೆ ನಿಧನಳಾಗಿದ್ದಳು.

ಯುಎನ್ಐ ಡಿಸಿ ವಿಎನ್ 1855