Sunday, Mar 29 2020 | Time 00:37 Hrs(IST)
National Share

ಮತ್ತೆ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಘೋಷ್

ನವದೆಹಲಿ, ಜ .15 (ಯುಎನ್ಐ) ಜವಾಹರಲಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರು ಜಾಮಿಯಾ ವಿಶ್ವವಿದ್ಯಾಲಯದ ಹೊರಗೆ ನಡೆಯುತ್ತಿರುವ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯಲ್ಲಿ ಇಂದು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ತಾವು ಮಾಡಿದ್ದೆಲ್ಲಾ ನಡೆಯುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಮೊದಲು ಕಾಶ್ಮೀರದಿಂದ ಪ್ರಾರಂಭಿಸಿದರು. ಈಗ ಸಾಮಾನ್ಯ ಜನರ ಹಕ್ಕುಗಳಿಗೆ ಅಡ್ಡಿಪಡಿಸಿದ್ದಾರೆ. ಆದರೆ ಜನರು ಇದರ ವಿರುದ್ಧ ಜಾಗೃತರಾಗುತ್ತಿದ್ದಾರೆ ಎಂದು ಹೇಳಿದರು.
ಕಾಶ್ಮೀರವನ್ನು ಮತ್ತು ಈಗ ಹೋರಾಡುತ್ತಿರುವವರನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಪ್ರತಿ ಪ್ರತಿಭಟನೆಯಲ್ಲಿಯೂ ಕಾಶ್ಮೀರ ಸಮಸ್ಯೆ ಒಂದು ಭಾಗವಾಗಿದೆ ಎಂದು ಅವರು ಹೇಳಿದರು.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡುವಾಗ ಘೋಷ್ ಅವರನ್ನು ಅವರ ಬೆಂಬಲಿಗರು ಮತ್ತು ಜೆಎನ್‌ಯು ವಿದ್ಯಾರ್ಥಿಗಳಿಂದ ಸುತ್ತುವರಿದಿದ್ದರು.
ಇತ್ತೀಚೆಗೆ, ಜನವರಿ 1 ಮತ್ತು 5 ರ ನಡುವೆ ನಡೆದ ಜೆಎನ್‌ಯು ಹಿಂಸಾಚಾರದ ಘಟನೆಗಳಲ್ಲಿ ಒಂಬತ್ತು ಮಂದಿ ಶಂಕಿತರಲ್ಲಿ ಘೋಷ್ ಅವರನ್ನು ದೆಹಲಿ ಪೊಲೀಸ್‌ನ ಎಸ್‌ಐಟಿ ಹೆಸರಿಸಿದೆ, ಈ ಬಗ್ಗೆ ತನಿಖೆ ನಡೆಸುತ್ತಿದೆ.
ಘಟನೆ ನಡೆದ ಬೆನ್ನಲ್ಲೇ ಘೋಷ್‌ ಅವರನ್ನು ಪೊಲೀಸರು ಶಂಕಿತ ಎಂದು ಹೆಸರಿಸಿದ್ದಾರೆ. ಆದರೆ ಘೋಷ್ ಆರೋಪಗಳನ್ನು ನಿರಾಕರಿಸಿದ್ದು, ಪೊಲೀಸರು ಸೂಕ್ತ ಸಾಕ್ಷ್ಯ ಪ್ರಸ್ತುತಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಮಧ್ಯೆ, ಚಳವಳಿಗಾರರು ಶಾಹೀನ್ ಬಾಗ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮುಂದುವರೆಸಿದ್ದಾರೆ.
ಜನವರಿ 5 ರಂದು ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ದೆಹಲಿ ಪೊಲೀಸರ ನಿಷ್ಕ್ರಿಯತೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.
ಯುಎನ್ಐ ಎಎಚ್ 2211
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..