Wednesday, Feb 26 2020 | Time 10:46 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಇರಾಕ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ

ನವದೆಹಲಿ, ಜ.8 (ಯುಎನ್ಐ) ಇರಾಕ್‌ನಲ್ಲಿ ಉಂಟಾಗಿರುವ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆ ದೇಶಕ್ಕೆ ಅನಗತ್ಯ ಪ್ರಯಾಣ ಬೆಳೆಸದಂತೆ ಭಾರತ ತನ್ನ ನಾಗರಿಕರಿಗೆ ಸೂಚನೆ ನೀಡಿದೆ.
ವಿದೇಶಾಂಗ ಸಚಿವಾಲಯ ಬುಧವಾರ ಈ ಸಂಬಂಧ ಭಾರತೀಯರಿಗೆ ಪ್ರಯಾಣ ಸಲಹೆಯನ್ನು ನೀಡಿದೆ.
ಇರಾನಿನ ಜನರಲ್ ಖಾಸಿಮ್‌ ಸುಲೈಮಾನಿ ಅವರನ್ನು ಅಮೆರಿಕ ವೈಮಾನಿಕ ದಾಳಿ ನಡೆಸಿ ಹತ್ಯೆ ಮಾಡಿದ ನಂತರ, ಇರಾಕ್‌ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ಬುಧವಾರ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಇರಾಕ್‌ನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಅಧಿಸೂಚನೆಯ ತನಕ ಇರಾಕ್‌ಗೆ ಅನಿವಾರ್ಯವಲ್ಲದ ಎಲ್ಲಾ ಪ್ರಯಾಣವನ್ನು ಕೈಬಿಡಬೇಕು ಎಂದು ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ.
ಇರಾಕ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳು ಎಚ್ಚರ ವಹಿಸಲು ಸೂಚಿಸಲಾಗಿದೆ, ಇರಾಕ್‌ನೊಳಗಿನ ಪ್ರಯಾಣವನ್ನು ಕೈಬಿಡಬೇಕು. ಇರಾಕ್‌ನಲ್ಲಿ ನೆಲೆಸಿರುವ ಭಾರತೀಯರಿಗೆ ಎಲ್ಲಾ ಸೇವೆಗಳನ್ನು ಒದಗಿಸಲು ಬಾಗ್ದಾದ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಎರ್ಬಿಲ್‌ನ ಕಾನ್ಸುಲೇಟ್ ಕಚೇರಿ ಕಾರ್ಯನಿರ್ವಹಿಸುತ್ತಲೇ ಇರುತ್ತದೆ ಎಂದು ವಿದೇಶಾಂಗ ಇಲಾಖೆ ಬಿಡುಗಡೆ ಮಾಡಿರುವ ಸೂಚನೆಯಲ್ಲಿ ತಿಳಿಸಿದೆ.
ಯುಎನ್ಐ ಎಎಚ್ 1053