Friday, Feb 28 2020 | Time 09:43 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಸತತ ನಾಲ್ಕನೇ ದಿನವೂ ತೈಲ ಬೆಲೆ ಏರಿಕೆ

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಸತತ ನಾಲ್ಕನೇ ದಿನವೂ ತೈಲ ಬೆಲೆ ಏರಿಕೆ
ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಸತತ ನಾಲ್ಕನೇ ದಿನವೂ ತೈಲ ಬೆಲೆ ಏರಿಕೆ

ನವದೆಹಲಿ, ಜನವರಿ 5 (ಯುಎನ್‌ಐ) ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಹಾಗೂ , ಅಮೆರಿಕ ಡ್ರೊನ್ ದಾಳಿಯ ಮೂಲಕ ಇರಾನ್ ಮಿಲಿಟರಿ ಕಮಾಂಡರ್‌ "ಸೊಲೈಮಾನಿಯನ್ನು ಕೊಂದು ಹಾಕಿದ ನಂತರ ದೇಶದಲ್ಲಿ ಸತತ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಅಧಿಸೂಚನೆಯ ಪ್ರಕಾರ ಪೆಟ್ರೋಲ್‌ನ ಪ್ರತಿ ಲೀಟರ್‌ಗೆ 9 ಪೈಸೆ ಮತ್ತು ಡೀಸೆಲ್ 11 ಪೈಸೆ ಹೆಚ್ಚಳವಾಗಿದೆ.

ದೆಹಲಿಯಲ್ಲಿ ಪೆಟ್ರೋಲ್‌ಗೆ 75.54 ರೂ.ಹಾಗೂ ಲೀಟರ್ ಡೀಸೆಲ್ 68.51 ರೂ ಆಗಿದೆ.

ಸೊಲೈಮಾನಿಯನ್ನು ಕೊಂದಿರುವ ಘಟನೆ ಮುಂದೆ ಅಮೆರಿಕ ಮತ್ತು ಇರಾನ್ ನಡುವೆ ನೇರ ಘರ್ಷಣೆಗೆ ಕಾರಣವಾಗಬಹುದು ಎಂದೂ ಅಂತಾರಾಷ್ಟ್ರೀಯ ತಜ್ಞರು ವ್ಯಾಖ್ಯಾನ ಮಾಡಿದ್ದಾರೆ.

ಭಾರತವು ತನ್ನ ಅಗತ್ಯದ ಪೈಕಿ ಶೇಕಡಾ 84 ರಷ್ಟು ತೈಲವನ್ನು ಆಮದು ಮಾಡಿಕೊಳ್ಳುತ್ತದೆ ಮತ್ತು ಜಾಗತಿಕ ಬೆಲೆಯಲ್ಲಿನ ಯಾವುದೇ ಏರಿಕೆ ತನ್ನ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುತ್ತದೆ.

ಭಾರತಕ್ಕೆ ಪೂರೈಕೆ, ಸರಬರಾಜು ಅಡ್ಡಿಪಡಿಸುವ ತಕ್ಷಣದ ಯಾವುದೆ ಬೆದರಿಕೆ ಇಲ್ಲ ಆದರೆ ಮತ್ತು ಬೆಲೆ ಏರಿಕೆ ಮಾತ್ರ ಪರಿಣಾಮ ಬೀರುವುದು ನಿಶ್ಚಿತ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುಎನ್ಐ ಕೆಎಸ್ಆರ್ 1311