Friday, Oct 30 2020 | Time 07:49 Hrs(IST)
Karnataka Share

ಮಲೆನಾಡಿನಲ್ಲಿ ಮಳೆ: ಪ್ರವಾಸಿಗರ ಸ್ವರ್ಗವಾದ ಟಿ.ಬಿ. ಡ್ಯಾಂ

ಬೆಂಗಳೂರು, ಸೆ 21 [ಯುಎನ್ ಐ] ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ.
ಹೀಗಾಗಿ ಈ ಎಲ್ಲಾ ಜಿಲ್ಲೆಗಳಲ್ಲಿ ಇಂದು ಕೂಡ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇದೇ 23ರ ವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಮಲೆನಾಡಿನಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ತುಂಗಾ ಮತ್ತು ಭದ್ರಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಿ ನದಿಗೆ ನೀರು ಬಿಟ್ಟಿರುವುದರಿಂದ. ಬಳ್ಳಾರಿ ಜಿಲ್ಲೆಯ ತುಂಗಭದ್ರಾ ಜಲಾಶಯ ಮತ್ತೊಮ್ಮೆ ತುಂಬಿ ಹರಿಯತೊಡಗಿದೆ.
ಇಂದು ಬೆಳಿಗ್ಗೆ ಜಲಾಶಯದ 68 ಗೇಟುಗಳನ್ನು ತೆರೆದು ಒಂದು ಲಕ್ಷದ 10 ಸಾವಿರ ಕ್ಕೂ ಹೆಚ್ಚು ಕ್ಯುಸೆಕ್ ನೀರನ್ನು ನದಿಗೆ ಹರಿ ಬಿಡಲಾಗಿದೆ. ಜಲಾಶಯದ ನದಿ ಪಾತ್ರದ ಕೆಳಭಾಗದ ಮತ್ತು ಮೇಲ್ಭಾಗದ ಜನತೆಗೆ ಮತ್ತೊಮ್ಮೆ ಪ್ರವಾಹದ ಬೀತಿ ಎದುರಾಗಿದೆ.ನದಿ ಪಾತ್ರದ ಜನ ಎಚ್ಚರದಿಂದ ಇರಬೇಕು ಎಂದು ತುಂಗಭದ್ರ ಆಡಳಿತ ಮಂಡಳಿ ತಿಳಿಸಿದೆ.
ತುಂಗಾ ಜಲಾಶಯದಿಂದ 63 ಸಾವಿರಕ್ಕೂ ಹೆಚ್ಚು ಮತ್ತು ಮತ್ತು ಭದ್ರಾ ಜಲಾಶಯದಿಂದ 50 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನದಿಗೆ ಹರಿಸಲಾಗಿದೆ. ಇದರಿಂದ ಕಂಪ್ಲಿ ಮತ್ತು ಗಂಗಾವತಿ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ನೀರು ಹರಿಯುವ ಸಾಧ್ಯತೆ ಇದೆ.
ಮತ್ತೊಂದೆಡೆ ಜಲಾಶಯದಿಂದ ನೂರು ಧುಮ್ಮಿಕ್ಕಿ ಹರಿಯುತ್ತಿದ್ದು, ಈ ದೃಶ್ಯ ನಯನ ಮನೋಹರವಾಗಿದೆ. ಓ.ಬಿ. ಡ್ಯಾಂ ಇದೀಗ ಪ್ರವಾಸಿಗರ ಸ್ವರ್ಗವಾಗಿ ಮಾರ್ಪಟ್ಟಿದೆ.
ಯುಎನ್ ಐ ವಿಎನ್ 1010
More News
ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

29 Oct 2020 | 9:12 PM

ಬೆಂಗಳೂರು, ಅ 28 (ಯುಎನ್ಐ) 1. ರಾಜ್ಯದಲ್ಲಿ 4 ಸಾವಿರದ 25 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸಂಖ್ಯೆ 8 ಲಕ್ಷದ 16 ಸಾವಿರದ 809ಕ್ಕೆ ಏರಿಕೆಯಾಗಿದೆ.

 Sharesee more..
ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

29 Oct 2020 | 8:53 PM

ತುಮಕೂರು,ಅ 29 (ಯುಎನ್ಐ) ಹಿಂದಿನ ಸರ್ಕಾರದ ಒಳ್ಳೆಯ ಯೋಜನೆ, ಕಾರ್ಯಕ್ರಮಗಳಿಗೆ ಅನುದಾನ ನೀಡದೇ ಇತಿಶ್ರೀ ಹಾಡಿದ್ದೆ ಬಿಜೆಪಿ, ಯಡಿಯೂರಪ್ಪ ಸರ್ಕಾರದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯವಾಗ್ದಾಳಿ ಮಾಡಿದ್ದಾರೆ.

 Sharesee more..