Sunday, Mar 29 2020 | Time 00:37 Hrs(IST)
National Share

ಮಹಾರಾಷ್ಟ್ರ: 10 ಲಕ್ಷ ರೂ. ಲಂಚ ಪಡೆಯುತ್ತಿದ್ದ ಉಪ ಜಿಎಸ್ ಟಿ ಆಯುಕ್ತ ಎಸಿಬಿ ಬಲೆಗೆ

ನಾಂದೇಡ್, ಜ 7(ಯುಎನ್‍ಐ)-ವ್ಯಕ್ತಿಯೊಬ್ಬರಿಂದ 10 ಲಕ್ಷ ರೂ. ಲಂಚ ಪಡೆಯುತ್ತಿದ್ದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಉಪ ಆಯುಕ್ತರೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ಲಂಚ ಪಡೆದ ಅಧಿಕಾರಿಯನ್ನು ಒಸ್ಮಾನಾಬಾದ್ ಜಿಲ್ಲೆಯ ವಾಸಿ ಪಟ್ಟಣದ ಬಾಳಸಾಹೇಬ್ ತುಕಾರಾಮ್ ದೇಶ್ ಮುಖ್ ಎಂದು ಗುರುತಿಸಲಾಗಿದೆ.
ಬಾಕಿ ಬಡ್ಡಿಯೊಂದಿಗೆ ವ್ಯಾಟ್ ಹಿಂತಿರುಗಿಸುವ ಪ್ರಸ್ತಾವನೆಯನ್ನು ಮುಂದಿನ ಹಂತಕ್ಕೆ ಕಳುಹಿಸಲು ದೂರುದಾರ ವ್ಯಕ್ತಿ ದೇಶ್ ಮುಖ್ ಅವರಿಗೆ ಕೇಳಿಕೊಂಡಿದ್ದ ಎಂದು ವರದಿ ತಿಳಿಸಿದೆ.
ಉನ್ನತಾಧಿಕಾರಿಗಳಿಗೆ ಪ್ರಸ್ತಾವನೆಯನ್ನು ಕಳುಹಿಸಲು ಆರೋಪಿ ಅಧಿಕಾರಿ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇದರಿಂದ ನೊಂದ ವ್ಯಕ್ತಿ ಭಾನುವಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದ.
ವ್ಯಕ್ತಿಯ ಆರೋಪವನ್ನು ಪರಿಶೀಲಿಸಿದ ನಂತರ ಡಿವೈಎಸ್ ಪಿ ವಿಜಯ್ ಡೊಂಗ್ರೆಬಿ ನೇತೃತ್ವದ ಎಸಿಬಿ ತಂಡ ಹೋಟೆಲ್‍ವೊಂದರಲ್ಲಿ ಬಲೆ ಬೀಸಿತ್ತು. ಅದರಂತೆ ಸೋಮವಾರ ರಾತ್ರಿ ಹೋಟೆಲ್ ನಲ್ಲಿ ವ್ಯಕ್ತಿಯಿಂದ ಲಂಚ ಪಡೆಯುತ್ತಿರುವಾಗಲೇ ಅಧಿಕಾರಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಕುರಿತಂತೆ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಯುಎನ್‍ಐ ಎಸ್‍ಎಲ್‍ಎಸ್ 1847
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..