Friday, Sep 25 2020 | Time 15:08 Hrs(IST)
  • ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ
  • ಅನಿಲ್‌ ಕುಂಬ್ಳೆ ನೀಡಿದ್ದ ಬೆಂಬಲವನ್ನು ಸ್ಮರಿಸಿದ ಪಂಜಾಬ್‌ ಸ್ಪಿನ್ನರ್‌ ರವಿ ಬಿಷ್ಣೋಯ್‌
  • ಕರೋನ ಲಸಿಕೆ, ಅಕ್ಟೋಬರ್ ನಿಂದ ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗ
  • ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
  • ಬಿಹಾರ ವಿಧಾನಸಭೆಗೆ ಮೂರು ಹಂತದ ಚುನಾವಣೆ: ನವೆಂಬರ್ 10 ರಂದು ಫಲಿತಾಂಶ
  • ಎಸ್ ಪಿ ಬಿ ಸ್ಥಿತಿ ಗಂಭೀರ, ಆಸ್ಪತ್ರೆ ಮುಂದೆ ಕುಟುಂಬ, ಗಣ್ಯರ ದಂಡು ಬಿಗಿಭದ್ರತೆ
  • ರೈತರ ಅನುಕೂಲಕ್ಕಾಗಿ ಕೃಷಿ ತಿದ್ದುಪಡಿ ಮಸೂದೆ: ಪ್ರಧಾನಿ
  • 19 ವರ್ಷಗಳಿಂದ ರಾಮಸ್ವಾಮಿ ವರದಿ ಕೊಳೆಯುತ್ತಿದೆ: ರಾಮ್ ದಾಸ್
  • ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆಯಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
  • ಡ್ರಗ್ಸ್ ಪ್ರಕರಣ: ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ
  • ಡ್ರಗ್ಸ್ ಪ್ರಕರಣ: ವಿಚಾರಣೆಗೆ ಕರೆದ ಮಾತ್ರಕ್ಕೆ ನಾನು ಅಪರಾಧಿಯಲ್ಲ; ನಟಿ ಅನುಶ್ರೀ
  • ಕೃಷಿ ಸಂಬಂಧಿತ ಮಸೂದೆಗೆ ವಿರೋಧ; ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
  • ಬಿಹಾರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟ ಸಾಧ್ಯತೆ
  • ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86 ಸಾವಿರ ಹೊಸ ಕೊರೊನಾ ಪ್ರಕರಣಗಳು, 1141 ಸಾವು!
  • ಸೆನ್ಸೆಕ್ಸ್ 400 ಅಂಕ ಚೇತರಿಕೆ
Parliament Share

ಮಹಿಳಾ ಸುರಕ್ಷತೆಗೆ ದೇಶಾದ್ಯಂತ ಆಂದೋಲನ : ರಾಜ್ಯಸಭೆಯಲ್ಲಿ ಪರ್ವಿನ್ ಸಲಹೆ

ಮಹಿಳಾ ಸುರಕ್ಷತೆಗೆ ದೇಶಾದ್ಯಂತ ಆಂದೋಲನ : ರಾಜ್ಯಸಭೆಯಲ್ಲಿ  ಪರ್ವಿನ್ ಸಲಹೆ
ಮಹಿಳಾ ಸುರಕ್ಷತೆಗೆ ದೇಶಾದ್ಯಂತ ಆಂದೋಲನ : ರಾಜ್ಯಸಭೆಯಲ್ಲಿ ಪರ್ವಿನ್ ಸಲಹೆ

ನವದೆಹಲಿ, ಡಿ 6 (ಯುಎನ್ಐ) ದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಲೈಂಗಿಕ ಕಿರುಕುಳ ತಪ್ಪಿಸಿ ಇದರ ಬಗ್ಗೆ ಜನಜಾಗೃತಿ ಮೂಡಿಸಲು ಮಹಿಳಾ ಸುರಕ್ಷತಾ ದಿನ ಇಲ್ಲವೇ ಮಹಿಳಾ ಸುರಕ್ಷತಾ ಸಪ್ತಾಹ ಆಚರಣೆ ಮಾಡಬೇಕೆಂದು ರಾಜ್ಯಸಭೆಯಲ್ಲಿ ಶುಕ್ರವಾರ ಪ್ರಬಲ ಕೂಗು ಕೇಳಿಬಂದಿದೆ.

ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಖಹ್ಕಾಶನ್ ಪರ್ವಿನ್ ಅವರು ಈ ವಿಷಯ ಪ್ರಸ್ತಾಪಿಸಿ ಮಹಿಳೆಯರ ಮೇಲೆ ಸರಣಿ ಅತ್ಯಾಚಾರ, ದೌರ್ಜನ್ಯ, ಭಯಾನಕ ರೀತಿಯಲ್ಲಿ ನಡೆಯುತ್ತಿದೆ.

ಇದನ್ನು ತಪ್ಪಿಸುವ ಗುರುತರ ಹೊಣೆಗಾರಿಕೆ ಎಲ್ಲರ ಮೇಲೂ ಇದೆ. ಈ ನಿಟ್ಟಿನಲ್ಲಿ ಮಹಿಳಾ ಸುರಕ್ಷತಾ ದಿನ ಇಲ್ಲವೇ ಮಹಿಳಾ ಸುರಕ್ಷತಾ ಸಪ್ತಾಹ ತಕ್ಷಣ ಕೈಗೊಂಡು ಜನಜಾಗೃತಿ ಮೂಡಿಸುವ ಅವಶ್ಯಕತೆ ಇಂದು ಬಹಳವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕಠಿಣ ಕ್ರಮಗಳನ್ನು, ಕಠಿಣ ಕಾನೂನುಗಳನ್ನು ಜಾರಿಗೆ ತಂದಿದ್ದರೂ ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ, ದಬ್ಬಾಳಿಕೆ ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇದನ್ನು ಹಮ್ಮಿಕೊಳ್ಳಬೇಕಾದ ಅಗತ್ಯವಿದೆ, ಅನಿವಾರ್ಯತೆಯೂ ಇದೆ ಎಂದು ಅವರು ಸದನದ ಗಮನ ಸೆಳೆದರು.

ಸಮಾಜದಲ್ಲಿ ನಾವು ವಿವಿಧ ವಾರ್ಷಿಕೋತ್ಸವ, ಜಯಂತಿ, ಸಪ್ತಾಹಗಳನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಈಗ ಪರಿಸ್ಥಿತಿ ಕೈಮೀರಿ ಹೋಗಿರುವುದರಿಂದ ಒಂದು ದಿನವಾದರೂ ಮಹಿಳಾ ಸುರಕ್ಷಿತ ದಿನ, ಇಲ್ಲವೇ ಒಂದು ವಾರಗಳ ಕಾಲ ಮಹಿಳಾ ಸುರಕ್ಷತಾ ಸಪ್ತಾಹ ಆಚರಿಸುವ ಅಗತ್ಯ ಬಹಳವಾಗಿದೆ ಎಂದರು.

ಪಂಚಾಯತಿ ಮಟ್ಟದಿಂದ ರಾಜ್ಯ ಮತ್ತು ಕೇಂದ್ರ ಮಟ್ಟದವರೆಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಿಳೆಯರ ಸುರಕ್ಷತೆಗೆ ದೇಶಾದ್ಯಂತ ದೊಡ್ಡ ಮಟ್ಟದ ಆಂದೋಲನ ನಡೆಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಯುಎನ್ಐ ಕೆಎಸ್ಆರ್ 1845

More News
ರಾಜ್ಯಸಭೆಯಿಂದ ಎರಡು ಧನವಿನಿಯೋಗ ಮಸೂದೆಗಳು ವಾಪಸ್

ರಾಜ್ಯಸಭೆಯಿಂದ ಎರಡು ಧನವಿನಿಯೋಗ ಮಸೂದೆಗಳು ವಾಪಸ್

23 Sep 2020 | 8:29 PM

ನವದೆಹಲಿ, ಸೆ 23 (ಯುಎನ್ಐ) ರಾಜ್ಯಸಭೆ ಬುಧವಾರ ಎರಡು ಧನವಿನಿಯೋಗ ಮಸೂದೆಗಳನ್ನು ವಾಪಸ್ ಕಳುಹಿಸಿದೆ. ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಧನವಿನಿಯೋಗ (ಸಂಖ್ಯೆ 3) ಮಸೂದೆ-2020 ಮತ್ತು ಧನವಿನಿಯೋಗ (ಸಂಖ್ಯೆ 4) ಮಸೂದೆ-2020ನ್ನು ರಾಜ್ಯಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿಮತದಿಂದ ಅಖೈರುಗೊಳಿಸಲಾಯಿತು.

 Sharesee more..
58 ದೇಶಗಳು  517 ಕೋಟಿ    ಇದು ಪ್ರಧಾನಿ ಮೋದಿ  ವಿದೇಶ ಪ್ರವಾಸ ವೆಚ್ಚ!

58 ದೇಶಗಳು 517 ಕೋಟಿ ಇದು ಪ್ರಧಾನಿ ಮೋದಿ ವಿದೇಶ ಪ್ರವಾಸ ವೆಚ್ಚ!

23 Sep 2020 | 4:32 PM

ನವದೆಹಲಿ, ಸೆ 23(ಯುಎನ್ಐ) ಭಾರತ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿದೇಶ ಪ್ರವಾಸ ವೆಚ್ಚ ಬೆಚ್ಚಿ ಬೀಳಿಸುತ್ತದೆ. 2015 ರಿಂದ ಈವರೆಗೆ ಒಟ್ಟು 58 ದೇಶಗಳಿಗೆ ಅವರು ಭೇಟಿ ನೀಡಿದ್ದಾರೆ. ಈ ಭೇಟಿಗಳಿಗಾಗಿ ಒಟ್ಟು 517 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದೆ.

 Sharesee more..