Monday, Jul 22 2019 | Time 07:38 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
National Share

ಮಹಿಳಾ ಸಂಸದರೊಂದಿಗೆ ಪ್ರಧಾನಿ ಮೋದಿ ಸಂವಾದ

ನವದೆಹಲಿ, ಜು 12 (ಯುಎನ್ಐ) ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಮಹಿಳಾ ಸಂಸದರೊಂದಿಗೆ ಸಂವಾದ ನಡೆಸಲಿದ್ದಾರೆ.
ಈಗಾಗಲೇ ಅವರು ಒಬಿಸಿ, ಎಸ್‌ಸಿ, ಎಸ್‌ಟಿ ವಿಭಾಗಗಳ ಸಂಸದರೊಂದಿಗೆ ಮಾತುಕತೆ ನಡೆಸಿದ್ದಾರೆ. ಈಗ ಅದರ ಮುಂದುವರಿದ ಭಾಗವಾಗಿ ಮಹಿಳಾ ಸಂಸದರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಸಂಸತ್ತಿನ ಉಭಯ ಸದನಗಳ ಬಿಜೆಪಿ ಸಂಸದರು ಪ್ರಧಾನಮಂತ್ರಿಯೊಂದಿಗೆ ಸಂವಹನ ನಡೆಸಲು ಮತ್ತು ಅವರ ಕಾರ್ಯಕ್ಷಮತೆಗೆ ಪ್ರಧಾನಿಯವರ ಮಾರ್ಗದರ್ಶನವನ್ನು ಪಡೆದುಕೊಳ್ಳಲು ಈ ಸಭೆಗಳನ್ನು ಆಯೋಜಿಸಲಾಗಿದೆ.
ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
2014-2019ರ 16ನೇ ಲೋಕಸಭೆಯ ಅವಧಿಯಲ್ಲಿಯೂ ಪ್ರಧಾನಿ ಮೋದಿ ಇಂತಹ ಪ್ರತ್ಯೇಕ ಸಭೆಗಳನ್ನು ನಡೆಸಿ, ವಿವಿಧ ರಾಜ್ಯಗಳ ಸಂಸದರೊಂದಿಗೆ ಸಂವಾದ ನಡೆಸಿದ್ದರು.
ಯುಎನ್ಐ ಎಎಚ್ ಆರ್ ಕೆ 853