Wednesday, Sep 23 2020 | Time 02:04 Hrs(IST)
Karnataka Share

ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ

ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಆ 09(ಯುಎನ್ಐ) ರಾಜ್ಯದ ಮಲೆನಾಡು,ಕರಾವಳಿ,ಉತ್ತರ ಕರ್ನಾಟಕ ಹಾಗೂ ಮೈಸೂರು ಜಿಲ್ಲೆ ಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಸೃಷ್ಟಿಯಾಗಿ ಆದ ಅವಘಡಗಳ ಕುರಿತಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರದಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್‌ ಅವರಿಗೆ ದೂರವಾಣಿ ಕರೆ ಮಾಡಿ ರಾಜ್ಯದ ಮಳೆ ಹಾಗೂ ಪ್ರವಾಹದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು.ರಾಜ್ಯದ ಮಡಿಕೇರಿ,ಚಿಕ್ಕಮಗಳೂರು,ದಕ್ಷಿಣ ಕನ್ನಡ,ಉತ್ತರ ಕನ್ನಡ ಹಾಗೂ ಬೆಳಗಾವಿ,ಬಾಗಲಕೋಟೆ,ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಲ್ಲಿ ಭಾರೀ ಮಳೆಯಾಗಿದೆ.ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.ಮಡಿಕೇರಿಯಲ್ಲಿ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದ್ದು,ಹಲವು ಕಡೆಗಳನ್ನು ಭೂಕುಸಿತ ಉಂಟಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.ಅತಿವೃಷ್ಠಿ ಮತ್ತು ಪ್ರವಾಹ,ಭೂ ಕುಸಿತ,ರಕ್ಷಣಾ ಕಾರ್ಯಗಳು, ಪರಿಹಾರ ಕಾರ್ಯಾಚರಣೆ ಬಗ್ಗೆ ಮುಖ್ಯಮಂತ್ರಿ ಬಿಎಸ್‌ವೈ ಅವರು ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಅಪರ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರಿಗೆ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.ಈಗಾಗಲೇ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದು ಜಿಲ್ಲೆಗಳಲ್ಲಿ ಯೇ ಮೊಕ್ಕಾ ಹೂಡಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಣೆ ಮಾಡಬೇಕು,ಪರಿಹಾರ ಕಾರ್ಯಾರಣೆ,ಜನರ ಸ್ಥಳಾಂತರ ಬೆಳೆ,ಮನೆ ಹಾನಿ ನಷ್ಟ ಪರಿಹಾರ ಕಾರ್ಯಕ್ಕೆ ಮುಂದಾಗಬೇಕೆಂದು ಸೂಚಿಸಿದ್ದಾರೆ.ಕೋವಿಡ್‌ ಕಾರಣಕ್ಕಾಗಿ ಯಡಿಯೂರಪ್ಪನವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಂದೆರಡು ದಿನಗಳಲ್ಲಿಯೇ ಬಿಡುಗಡೆಯಾಗುವ ಸಾಧ್ಯತೆ ಇದೆ.ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆಯಿಂದಲೇ ಎಲ್ಲವನ್ನು ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಗಳು ಕ್ಷಣ ಕ್ಷಣದ ಮಾಹಿತಿಗಳು,ಕಾರ್ಯಾಚರಣೆ,ಪರಿಹಾರದ ಬಗ್ಗೆ ಜಿಲ್ಲಾಧಿಕಾರಿ ಗಳಿಗೆ,ಉಸ್ತುವಾರಿ ಸಚಿವರುಗಳಿಗೆ ಸಲಹೆ ಸೂಚನೆ ನೀಡುತ್ತಿದ್ದಾರೆ.ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ರಾಜ್ಯ ಸಚಿವರು ಸಂವಾದ ನಡೆಸಲಿದ್ದು,ಮಳೆ ಹಾಗೂ ಪ್ರವಾಹದಿಂದ ಆಗಿರುವ ಬೆಳೆ ಹಾನಿ,ಮಳೆ ಹಾನಿ.ಪ್ರಮಾಣ ಹಾನಿ.ಜಾನುವಾರುಗಳ ಹಾನಿಯ ಬಗ್ಗೆ ಮಾಹಿತಿ ನೀಡಲಿದ್ದು ಹೆಚ್ಚಿನ ಪರಿಹಾರವನ್ನು ಇದೇ ವೇಳೆ ಕೋರುವ ಸಾಧ್ಯತೆ ಇದೆ ಎನ್ನಲಾಗಿದೆ.ಯುಎನ್ಐ ಎಸ್ಎಂಆರ್ ವಿಎನ್ 1255

More News
ರಾಜ್ಯದಲ್ಲಿ 6974 ಹೊಸ ಕೋವಿಡ್‌ ಪ್ರಕರಣಗಳ ವರದಿ; ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೇರಿಕೆ

ರಾಜ್ಯದಲ್ಲಿ 6974 ಹೊಸ ಕೋವಿಡ್‌ ಪ್ರಕರಣಗಳ ವರದಿ; ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೇರಿಕೆ

22 Sep 2020 | 10:23 PM

ಬೆಂಗಳೂರು, ಸೆ 22 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6974 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 83 ಮಂದಿ ಮೃತಪಟ್ಟಿದ್ದಾರೆ.

 Sharesee more..

ಕಾಂಗ್ರೆಸ್ ವಕ್ತಾರರ ಪಟ್ಟಿ ಸಿದ್ಧತೆ

22 Sep 2020 | 9:27 PM

 Sharesee more..