Monday, Jun 1 2020 | Time 02:10 Hrs(IST)
International Share

ಮುಚ್ಚಿರುವ ಚರ್ಚ್, ಪ್ರಾರ್ಥನಾ ಮಂದಿರಗಳ ಬಾಗಿಲು ತೆರೆಯಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ

ವಾಷಿಂಗ್ಟನ್, ಮೇ ೨೩(ಯುಎನ್‌ಐ) ಅಮೆರಿಕಾದಲ್ಲಿ ಚರ್ಚ್ ಗಳು ಹಾಗೂ ಇತರ ಪ್ರಾರ್ಥನಾ ಮಂದಿರಗಳನ್ನು ಕೂಡಲೇ ತೆರೆಯಬೇಕೆಂದು ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸೂಚನೆ ನೀಡಿದ್ದಾರೆ. ಪ್ರಾರ್ಥನಾ ಕೇಂದ್ರಗಳು ಅತ್ಯಂತ ಮುಖ್ಯ ಸ್ಥಳಗಳು, ಅವುಗಳನ್ನು ಮುಕ್ತಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಗಳ ಗರ್ವನರ್ ಗಳಿಗೆ ಕರೆ ನೀಡಿದ್ದಾರೆ.
ಧಾರ್ಮಿಕ ನಂಬಿಕೆಗಳಿಗೆ ಮಹತ್ವದ ಕೇಂದ್ರಗಳಾಗಿರುವ ಪ್ರಾರ್ಥನಾ ಮಂದಿರಗಳನ್ನು ಈ ವಾರದ ಅಂತ್ಯದೊಳಗೆ ತೆರೆಯಬೇಕೆಂದು ಡೊನಾಲ್ಡ್ ಟ್ರಂಪ್ ಆದೇಶ ಜಾರಿಗೊಳಿಸಿದ್ದಾರೆ. ಶ್ವೇತ ಭವನದಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಆದಷ್ಟು ತ್ವರಿತವಾಗಿ ಮತ್ತೆ ದೇಶದ ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸಲು ಟ್ರಂಪ್ ಬಯಸಿದ್ದು, ಈ ಹಿನ್ನಲೆಯಲ್ಲಿ ಅವರು ಎಲ್ಲ ರಾಜ್ಯಗಳ ಗರ್ವನರ್ ಗಳಿಗೆ ಆದೇಶ ನೀಡುತ್ತಿದ್ದಾರೆ.
ಪ್ರಾರ್ಥನಾ ಮಂದಿರಗಳನ್ನು ತೆರೆಯಬೇಕೆಂದು ಟ್ರಂಪ್ ಹೇಳಿದ ತಕ್ಷಣ, ಅಮೆರಿಕಾದ ರೋಗ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕೇಂದ್ರ (ಸಿಡಿಸಿ) ಕೆಲ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು, ಧಾರ್ಮಿಕ ಕೇಂದ್ರಗಳನ್ನು ಸುರಕ್ಷಿತವಾಗಿ ಹೇಗೆ ತೆರೆಯಬೇಕು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ವಿಶಾಲ ಪ್ರದೇಶಗಳಲ್ಲಿ ಮಾತ್ರವೇ ಪ್ರಾರ್ಥನೆಗಳನ್ನು ನಡೆಸಬೇಕು ಎಂದು ಅದರಲ್ಲಿ ಸೂಚಿಸಿದೆ.
ಯುಎನ್‌ಐ ಕೆವಿಆರ್ ೧೨೪೮
More News
ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

31 May 2020 | 6:08 PM

ನವದೆಹಲಿ, ಮೇ 31 (ಯುಎನ್ಐ)- ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ವಿಶ್ವದಲ್ಲಿ 60 ಲಕ್ಷದಾಟಿದ್ದು, 3.64 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

 Sharesee more..
ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

31 May 2020 | 5:31 PM

ವಾಷಿಂಗ್ಟನ್ /ನವದೆಹಲಿ, ಮೇ 31 (ಯುಎನ್ಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನಡೆಯಬೇಕಿದ್ದ ಜಿ7 ಶೃಂಗ ಸಭೆಯನ್ನು ಮುಂದೂಡಿದ್ದು, ಅದನ್ನು 'ಔಟ್ ಡೇಟೆಟ್' ಎಂದು ಕರೆದಿದ್ದಾರೆ. ಜೊತೆಗೆ, ಜಿ 7 ತಂಡದಲ್ಲಿ ಭಾರತ, ಆಸ್ಟ್ರೇಲಿಯಾ, ರಷ್ಯಾ ಮತ್ತು ದಕ್ಷಿಣ ಕೊರಿಯಾವನ್ನು ಸೇರಿಸಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.

 Sharesee more..