Friday, Dec 13 2019 | Time 10:50 Hrs(IST)
  • ಡಯಾಲಿಸಿಸ್ ಉತ್ಪನ್ನ ಪೂರೈಕೆ: ಮೆಡಿಕಾಬಜಾರ್ - ಪ್ರೋ ಮೆಡಿಕಲ್ ಇಂಡಿಯಾ ಒಪ್ಪಂದ
  • ಪೌರತ್ವ ಮಸೂದೆ, ಕೇಂದ್ರದ ವಿರುದ್ಧ ಕೇರಳ, ಪಂಜಾಬ್ ಬಹಿರಂಗ ಸೆಡ್ಡು
  • ಪ್ರಧಾನಿ ಜಾನ್ಸನ್‌ಗೆ 'ದೊಡ್ಡ ಜಯ': ಟ್ರಂಪ್
  • ಚುನಾವಣಾ ಕಣದಲ್ಲಿ ಕ್ರಿಮಿನಲ್ ಗಳು , ಕೋಟ್ಯಾಧಿಪತಿಗಳು
  • ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ 19ರಂದು ದೇಶಾದ್ಯಂತ ಪ್ರತಿಭಟನೆಗೆ ಎಡ ಪಕ್ಷಗಳ ಕರೆ
  • ಫಿಲಿಪೈನ್ಸ್‌ನಲ್ಲಿ ರಸ್ತೆ ಅಪಘಾತ: ಕನಿಷ್ಠ 6 ಸಾವು
  • ಕನ್ಸರ್ವೇಟಿವ್ ಪಕ್ಷಕ್ಕೆ ವಿಜಯ : ಎಕ್ಸಿಟ್ ಪೋಲ್ ಸಮೀಕ್ಷೆ
Karnataka Share

ಮಾಜಿ ಸಚಿವರ ಕಾರು ಡಿಕ್ಕಿ: ಬೈಕ್ ಸವಾರ ಸಾವು

ನೆಲಮಂಗಲ, ನ. 20 (ಯುಎನ್ಐ) ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಗಣೇಶ್ ಪ್ರಯಾಣಿಸುತ್ತಿದ್ದ ಕಾರು ದಾಬಸ್ ಪೇಟೆಯಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ.
ಬೈಕ್ ಸವಾರ 50 ವರ್ಷದ ಯೋಗಾನಂದ ಸ್ಥಳದಲ್ಲೇ ಮೃತಪಟ್ಟಿದ್ದು, ಬೆಂಗಳೂರಿನ ಪ್ರಕಾಶ್ ನಗರದ ನಿವಾಸಿ ಎಂದು ತಿಳಿದು ಬಂದಿದೆ.
ಜಿಂದಾಲ್ ಕಾರ್ಖಾನೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ನಡೆದಿದ್ದು, ಶಾಮನೂರು ಶಿವಶಂಕರಪ್ಪ ಅವರ ಪುತ್ರ ಗಣೇಶ್, ವೀರೇಶ್ ಹಾಗೂ ಕಾರು ಚಾಲಕ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ತಾಲೂಕಿನ ತುಮಕೂರು ಕಡೆಯಿಂದ ಬೆಂಗಳೂರಿಗೆ ಬಿಎಂಡಬ್ಲ್ಯೂ ಕಾರಿನಲ್ಲಿ ಗಣೇಶ್ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುಎನ್ಐ ಪಿಕೆ ಎಎಚ್ 1726
More News
ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ : ಮುಖ್ಯಮಂತ್ರಿ,ಸಚಿವರು ಹಾಗೂ ಕೈ ನಾಯಕರಿಂದ ಆರೋಗ್ಯ ವಿಚಾರಣೆ

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ : ಮುಖ್ಯಮಂತ್ರಿ,ಸಚಿವರು ಹಾಗೂ ಕೈ ನಾಯಕರಿಂದ ಆರೋಗ್ಯ ವಿಚಾರಣೆ

12 Dec 2019 | 10:14 PM

ಬೆಂಗಳೂರು,ಡಿ 12(ಯುಎನ್ಐ) ಆಂಜಿಯೋಪ್ಲಾಸ್ಟ್ ಚಿಕಿತ್ಸೆ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಅವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ,ಕೆ.ಎಸ್.ಈಶ್ವರಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಖಾಸಗಿ ಆಸ್ಪತ್ರೆಗೆ ಬೇಟಿ ನೀಡಿ ಬೇಗ ಗುಣಮುಖರಾಗ ವಂತೆ ಹಾರೈಸಿದರು.

 Sharesee more..