Sunday, Mar 29 2020 | Time 00:24 Hrs(IST)
National Share

ಮಾಜಿ ಸಿಎಂಗಳನ್ನು ದೇಶದ್ರೋಹಿ ಎಂದು ಜರಿದಿಲ್ಲ : ಷಾ ಸ್ಪಷ್ಟನೆ

ನವದೆಹಲಿ, ಜನವರಿ 3 (ಯುಎನ್ಐ) ಗೃಹಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳನ್ನು ದೇಶದ್ರೋಹಿ’ಗಳು ಎಂದು ಯಾರೊಬ್ಬರು ಕರೆದಿಲ್ಲ, ಜರಿದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಷ್ಟೇ ಅಲ್ಲ, ಅವರುಗಳ ಬಿಡುಗಡೆ ಬಗ್ಗೆ ಆಯಾ ಕೇಂದ್ರಾಡಳಿತ ಪ್ರದೇಶದ ಆಡಳಿತವೇ ನಿರ್ಧಾರ ಕೈಗೊಳ್ಳಲಿದೆ ಎಂದೂ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರು ಕೆಲವೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. 370ನೇ ವಿಧಿಯನ್ನು ಮುಟ್ಟಿದರೆ ದೇಶಕ್ಕೆ ಬೆಂಕಿ ಬೀಳಲಿದೆ ಎಂದಿದ್ದಾರೆ. ಇಂಥಹ ಪ್ರಚೋದನಾಕಾರಿ ಹೇಳಿಕೆಗಳು ಪಾಕಿಸ್ತಾನಕ್ಕೆ 370ನೇ ವಿಧಿ ಬಗ್ಗೆ ಚರ್ಚೆಗೆ ಆಹ್ವಾನ ನೀಡಿದಂತೆ ಆಗಲಿದೆ.

ಈ ಕಾರಣಕ್ಕಾಗಿ, ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದ್ದು, ಇನ್ನೂ ಕೆಲವು ದಿನ ಇದೆ ಪರಿಸ್ಥಿತಿ ಮುಂದುವರಿಯಲಿದೆ , ಮೇಲಾಗಿ ಕಾಶ್ಮೀರದಲ್ಲಿ ಸಹಜ ಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಎಂದಿನಂತೆ ಸಾಗಿದೆ ಎಂದೂ ಸಚಿವ ಅಮಿತ್ ಶಾ ಹೇಳಿದ್ದಾರೆ.
ಯುಎನ್ಐ ಕೆಎಸ್ಆರ್ 2230
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..