Saturday, Mar 28 2020 | Time 23:34 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
National Share

ಮೋದಿ ಆಶೀರ್ವಾದ ಕೋರಿದ ಕೇಜ್ರಿವಾಲ್; ಕೇಂದ್ರದೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡುವುದಾಗಿ ಹೇಳಿಕೆ

ನವದೆಹಲಿ, ಫೆ 16(ಯುಎನ್ಐ)- ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಕೋರಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್,ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗೆ ಕೇಂದ್ರದೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡುವುದಾಗಿ ಹೇಳಿದ್ದಾರೆ .
ನಗರದ ಐತಿಹಾಸಿಕ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನವನ್ನು ಕಳುಹಿಸಿದ್ದೇನೆ. ಆದರೆ ಅವರು ಬರಲು ಸಾಧ್ಯವಾಗಿಲ್ಲ. ಅವರು ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಿರಬಹುದು. ದೆಹಲಿಯ ಅಭಿವೃದ್ಧಿಗೆ ಪ್ರಧಾನಮಂತ್ರಿಯವರ ಆಶೀರ್ವಾದ ತಮಗೆ ಬೇಕಾಗಿದೆ. ದೆಹಲಿಯ ಅಭಿವೃದ್ಧಿಗೆ ಕೇಂದ್ರದೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಸಿದ್ಧನಿದ್ದೇನೆ.’ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ತಮ್ಮ ವಿರುದ್ಧ ಮಾಡಿರುವ ಎಲ್ಲಾ ಟೀಕೆಗಳಿಗೆ ವಿರೋಧ ಪಕ್ಷಗಳನ್ನು ಕ್ಷಮಿಸಿದ್ದೇನೆ ಎಂದು ಕೇಜ್ರಿವಾಲ್ ಹೇಳಿದರು.
‘ನಾನು ಎಲ್ಲರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ. ದೆಹಲಿಯ ಪ್ರತಿಯೊಬ್ಬರ ಮುಖ್ಯಮಂತ್ರಿ ಆಗಿದ್ದೇನೆ. ನೀವು ಈಗ ನನ್ನ ಕುಟುಂಬವಾಗಿದ್ದೀರಿ. ಧರ್ಮ ಮತ್ತು ಜಾತಿಗಳು ಹಾಗೂ ಆರ್ಥಿಕ ಸ್ಥಿತಿಗಳನ್ನು ಮೀರಿ ಜನರಿಗಾಗಿ ಕಾರ್ಯ ನಿರ್ವಹಿಸಲಿದ್ದಾನೆ.’ ಎಂದು ಹೇಳಿದರು.
ಯುಎನ್ಐ ಎಸ್ಎಲ್ಎಸ್ 1556
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..