Wednesday, Jan 29 2020 | Time 14:49 Hrs(IST)
 • ಅಮೆರಿಕಾದಲ್ಲಿ ಸಿನಿಮಾಗಳಿಗಿಂತ, ಗ್ರಂಥಾಲಯಗಳಿಗೆ ತೆರಳುವವರ ಸಂಖ್ಯೆಯೇ ಹೆಚ್ಚಂತೆ !
 • ವುಹಾನ್‌ನಿಂದ ವಿದೇಶಿ ನಾಗರಿಕರ ಸ್ಥಳಾಂತರಕ್ಕೆ ಚೀನಾ ಸಹಾಯ
 • ಎಂ ಎಸ್ ಧೋನಿ ದಾಖಲೆ ಮುರಿದ ನಾಯಕ ವಿರಾಟ್ ಕೊಹ್ಲಿ
 • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
 • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
 • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
 • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
Parliament Share

ಮೋದಿ ಸರ್ಕಾರದ ಕಾಶ್ಮೀರದ ನೀತಿ: ಲೋಕಸಭೆಯಲ್ಲಿ ಶಶಿ ತರೂರ್ ಆಕ್ರೋಶ

ಮೋದಿ ಸರ್ಕಾರದ ಕಾಶ್ಮೀರದ ನೀತಿ: ಲೋಕಸಭೆಯಲ್ಲಿ ಶಶಿ ತರೂರ್ ಆಕ್ರೋಶ
ಮೋದಿ ಸರ್ಕಾರದ ಕಾಶ್ಮೀರದ ನೀತಿ: ಲೋಕಸಭೆಯಲ್ಲಿ ಶಶಿ ತರೂರ್ ಆಕ್ರೋಶ

ನವದೆಹಲಿ, ಡಿ 4(ಯುಎನ್ಐ) ಎನ್ಸಿಪಿ ನಾಯಕರಾದ ಫರೂಕ್ ಅಬ್ದುಲ್ಲ ,ಒಮರ್ ಅಬ್ದುಲ್ಲಾ ಮತ್ತು ಪಿಡಿಪಿಯ ಮೆಹಬೂಬಾ ಮುಫ್ತಿ ಮತ್ತಿತರೆ ರಾಜಕೀಯ ನಾಯಕರ ಬಂಧನದ ಕ್ರಮವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಬಲವಾಗಿ ಖಂಡಿಸಿದ್ದಾರೆ.

ಜೊತೆಗೆ ಕಾಶ್ಮಿರ ಕುರಿತ ಸರಕಾರದ ನೀತಿ ,ನಿಲುವುಗಳನ್ನು ಅವರು ಲೋಕಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಗೃಹ ಸಚಿವ ಅಮಿತ್ ಷಾ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆ ಮಂಡಿಸಿ ಸುಮಾರು ನಾಲ್ಕು ತಿಂಗಳು ಕಳೆದಿವೆ ಆ ಸಮಯದಿಂದಲೂ ಕೆಲವೂ , ರಾಜಕೀಯ ಮುಖಂಡರು ಮತ್ತು ಸರಕಾರದ ಹಿಡಿತದಲ್ಲಿದ್ದಾರೆ ಎಂದು ಪೂರಕ ಬಜೆಟ್ ಮೇಲಿನ ಚರ್ಚೆಯ ಸಮಯಲ್ಲಿ ಸರಕಾರ ನಿಲುವನ್ನು ಟೀಕಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿಗೆ ಮರಳುವ ಮುನ್ನವೆ 2019-20ರ ಆರ್ಥಿಕ ಪೂರಕ ಬೇಡಿಕೆಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸ್ತಾಪಿಸಿರುವ ಹಂಚಿಕೆ ಬಹಳ ಕಡಿಮೆ ಎಂದು ಅವರು ಅಸಮಾಧಾನ ಹೊರ ಹಾಕಿದರು.

30 ರಾಜಕೀಯ ಮುಖಂಡರನ್ನು ಬಂಧನದಲ್ಲಿಡಲಾಗಿದೆ ಮತ್ತು ಅವರಲ್ಲಿ ಕೆಲವರನ್ನು 'ಏಕಾಂತದಲ್ಲಿ ಇರಿಸಲಾಗಿದೆ ಎಂದು ಅವರು ಸದನದ ಗಮನಸೆಳೆದರು.

ಪಿಡಿಪಿಯ ಮೆಹಬೂಬಾ ಮುಫ್ತಿ ಮತ್ತುಎನ್ ಸಿಪಿ ನಾಯಕರಾದ ಒಮರ್ ಅಬ್ದುಲ್ಲಾ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಮೇಲಿಂದ ಮೇಲೆ ಒಂದು ಸ್ಥಳದಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದೂ ಶಶಿ ತರೂರ್ ದೂರಿದರು.

ಯುಎನ್ಐ ಕೆಎಸ್ಆರ್ 1920