Sunday, Mar 29 2020 | Time 00:48 Hrs(IST)
National Share

ಮುಂಬೈ ಕಾರ್ಖಾನೆಯಲ್ಲಿ ಭಾರಿ ಬೆಂಕಿ ದುರಂತ: ಇಬ್ಬರು ಸಾವು

ಮುಂಬೈ, ಡಿ28(ಯುಎನ್‍ಐ)- ನಗರದ ಘಾಟ್ಕೋಪರ್ ನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿರುವುದಾಗಿ ವರದಿಯೊಂದು ಶನಿವಾರ ತಿಳಿಸಿದೆ.
ಕಳೆದ ಮಧ್ಯರಾತ್ರಿ ದುರಂತ ಸಂಭವಿಸಿದ್ದು, ಮಾಹಿತಿ ತಲುಪಿದ ತಕ್ಷಣ ಸುಮಾರು 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ.
ಬೆಂಕಿಯ ತೀವ್ರ ಸ್ವರೂಪದ್ದಾಗಿದ್ದು, ಜ್ವಾಲೆಗಳ ತೀವ್ರತೆ ನಾಲ್ಕರ ಮಟ್ಟದಲ್ಲಿತ್ತು ಎಂದು ಅಗ್ನಿಶಾಮಕ ದಳ ಸಿಬ್ಬಂದಿ ತಿಳಿಸಿದ್ದಾರೆ.
ದುರಂತದಲ್ಲಿ ಗಾಯಗೊಂಡ ಇಬ್ಬರನ್ನು ಹೊರತುಪಡಿಸಿ ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ. ವ್ಯಕ್ತಿಯ ಪತ್ತೆಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬೆಂಕಿಗೆ ಕಾರಣವನ್ನು ತಿಳಿಯಲು ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ದೆಹಲಿಯಲ್ಲಿ ಕೆಲ ದಿನಗಳ ಹಿಂದೆ ಪ್ರತ್ಯೇಕ ಕಾರ್ಖಾನೆಗಳಲ್ಲಿ ನಡೆದ ಪ್ರತ್ಯೇಕ ಬೆಂಕಿ ದುರಂತಗಳಲ್ಲಿ ಹತ್ತಾರು ಮಂದಿ ಸಾವನ್ನಪ್ಪಿದ್ದನ್ನು ಇಲ್ಲಿ ಗಮನಿಸಬಹುದಾಗಿದೆ.
ಯುಎನ್‍ಐ ಎಸ್‍ಎಲ್‍ಎಸ್ 1326
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..