Saturday, Mar 28 2020 | Time 23:45 Hrs(IST)
 • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
 • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
 • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
 • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
 • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
 • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
 • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
 • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
 • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
 • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
 • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
 • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
 • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
 • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
 • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
Karnataka Share

ಮೂರ್ನಾಲ್ಕು ದಿನದಲ್ಲಿ ಸಂಪುಟ ವಿಸ್ತರಣೆ ಖಚಿತ: ಬಿ.ಸಿ ಪಾಟೀಲ್!

ಬೆಂಗಳೂರು,ಜ 24(ಯುಎನ್ಐ)ಮೂರ್ನಾಲ್ಕು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದು ತಿಂಗಳಾಂತ್ಯದೊಳಗೆ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಸಚಿವ ಸ್ಥಾನದ ಆಕಾಂಕ್ಷಿ ಬಿ.ಸಿ ಪಾಟೀಲ್ ಹೇಳಿದ್ದಾರೆ.

ವಿದೇಶದಿಂದ ಸಿಎಂ ಹಿಂದಿರುಗುತ್ತಿದ್ದಂತೆ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಶಾಸಕ ಬಿ.ಸಿ ಪಾಟೀಲ್ ಭೇಟಿ ನೀಡಿದರು.ಸಚಿವ ಸ್ಥಾನದ ಅಪೇಕ್ಷೆ ಮುಂದಿಟ್ಡು ವಿಳಂಬ ಮಾಡದಂತೆ ಮನವಿ ಮಾಡಿದರು. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ ಎನ್ನಲಾಗಿದೆ.

ಸಿಎಂ ಭೇಟಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಸಿ ಪಾಟೀಲ್,ವಿದೇಶ ಪ್ರವಾಸ ಮುಗಿಸಿ ಸಿಎಂ ವಾಪಸ್ ಬಂದಿದ್ದಾರೆ ಹಾಗಾಗಿ ಅವರಿಗೆ ಅಭಿನಂದಿಸಲು ಬಂದಿದ್ದೆ, ಇನ್ನು ಎರಡು ಮೂರು ದಿನದಲ್ಲಿ ಸಚಿವ ಸಂಪುಟ ರಚನೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ ದಾವೋಸ್ ನಿಂದ ಬಂದ ಕೂಡಲೇ ಈ ಮಾತನ್ನು ಅವರು ನಮಗೆ ತಿಳಿಸಿದ್ದಾರೆ ಇನ್ನು ಮೂರು ನಾಲ್ಕು ದಿನದಲ್ಲಿ ಸಂಪುಟ ವಿಸ್ತರಣೆ ಆಗುವುದು ಖಚಿತ ಎಂದರು.

ಗೆದ್ದವರನ್ನು ಮಾತ್ರ ಸಂಪುಟಕ್ಕೆ ತೆಗೆದುಕೊಳ್ಳುವ ಬಗ್ಗೆ ಚರ್ಚೆ ಮಾಡುವುದು ನನ್ನ ವ್ಯಾಪ್ತಿಯಲ್ಲಿಲ್ಲ ಅದನ್ನು ಮುಖ್ಯಮಂತ್ರಿಗಳು ಹೇಳಬೇಕು ನಮ್ಮಲ್ಲಿ ಕೆಲವರನ್ನು ಸಂಪುಟಕ್ಕೆ ತೆಗೆದುಕೊಂಡು ಕೆಲವರನ್ನು ಬಿಡುತ್ತಾರೆ ಎನ್ನುವ ಮಾತುಗಳ ಕುರಿತು ಈಗ ಚರ್ಚೆ ಮಾಡುವುದಿಲ್ಲ ಆದರೆ ಸಂಪುಟ ವಿಸ್ತರಣೆ ಆಗುತ್ತದೆ ಎನ್ನುವ ವಿಶ್ವಾಸ ಇದೆ ಅಗತ್ಯಬಿದ್ದರೆ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ ಎಂದರು.

ನಾನು ಯಾವ ಖಾತೆಗೆ ಬೇಡಿಕೆಯನ್ನು ಇಟ್ಟಿಲ್ಲ ಯಾವುದೇ ಖಾತೆ ಕೊಟ್ಟರು ನಿರ್ವಹಿಸುವ ಶಕ್ತಿ ಇದೆ ಮುಖ್ಯಮಂತ್ರಿಗಳು ನೀಡುವ ಖಾತೆಯನ್ನು ನಿಭಾಯಿಸುತ್ತೇನೆ ಎಂದರು.

ಯುಎನ್ಐ ಎಸ್ಎಂಆರ್ ವಿಎನ್‌ 1825
More News
ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

28 Mar 2020 | 9:54 PM

ಬೆಂಗಳೂರು,ಮಾ 28 []ಯುಎನ್ಐ] ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

 Sharesee more..
ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್

ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್

28 Mar 2020 | 9:41 PM

ಬೆಂಗಳೂರು, ಮಾ 28 (ಯುಎನ್ಐ) ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿರುವವರೆಗೆ ಸಾಲ‌ಗಾರರ ಆಸ್ತಿಪಾಸ್ತಿ ಅಥವಾ ವಾಹನಗಳ ಹರಾಜು ಪ್ರಕ್ರಿಯೆ ನಡೆಸುವಂತೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

 Sharesee more..