Friday, Feb 28 2020 | Time 09:36 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಮೂಲಸೌಕರ್ಯ ಅಭಿವೃದ್ದಿಗೆ 50 ಲಕ್ಷ ಕೋಟಿ ವೆಚ್ಚ : ಸೀತಾರಾಮನ್

ಮೂಲಸೌಕರ್ಯ ಅಭಿವೃದ್ದಿಗೆ 50 ಲಕ್ಷ ಕೋಟಿ ವೆಚ್ಚ : ಸೀತಾರಾಮನ್
ಮೂಲಸೌಕರ್ಯ ಅಭಿವೃದ್ದಿಗೆ 50 ಲಕ್ಷ ಕೋಟಿ ವೆಚ್ಚ : ಸೀತಾರಾಮನ್

ನವದೆಹಲಿ, ಡಿ 31(ಯುಎನ್ಐ) ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕಳೆದ 6 ವರ್ಷಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ದಿಗಾಗಿಯೇ 50 ಲಕ್ಷ ಕೋಟಿ ರೂಪಾಯಿ ವಿನಿಯೋಗಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯೋತ್ಸವದಂದು ದೇಶದ ಮೂಲಸೌಕರ್ಯ ಅಭಿವೃದ್ಧಿಗಾಗಿ ಕಾರ್ಯಪಡೆ ರಚನೆಯ ಉಲ್ಲೇಖ ಮಾಡಿ, ಮೂಲಸೌಕರ್ಯ ಅಭಿವೃದ್ಧಿಗಾಗಿ ರಚಿಸಲಾಗಿದ್ದ ಕಾರ್ಯಪಡೆ ನಾಲ್ಕು ತಿಂಗಳ ಅಲ್ಪಾವಧಿಯಲ್ಲಿ 70 ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಇಂದು 102 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಗುರುತಿಸಿದೆ ಎಂದರು.ಇನ್ನು ಕೆಲವೇ ವಾರಗಳಲ್ಲಿ ಮತ್ತೆ 3 ಲಕ್ಷ ಕೋಟಿ ರೂಪಾಯಿಯ ಯೋಜನೆಯೊಂದು ಇದಕ್ಕೆ ಸೇರಲಿದೆ. 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ವ್ಯಾಪಿಸಿರುವ ಈ ಯೋಜನೆಗಳು 21 ಸಚಿವಾಲಯಕ್ಕೆ ಸಂಬಂಧಪಟ್ಟಿವೆ ಎಂದು ಅವರು ತಿಳಿಸಿದ್ದಾರೆ.

102 ಲಕ್ಷ ಕೋಟಿ ರೂಪಾಯಿ ವೆಚ್ಚದ ರಾಷ್ಟ್ರೀಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು 2025ರ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ಗೆ ಗುರಿ ತಲುಪಲು ಅನುಕೂಲವಾಗಲಿದೆ.

ವಿದೇಶಿ ಹೂಡಿಕೆಯನ್ನು ಉತ್ತೇಜನದ ಬಗ್ಗೆ ಮಾತನಾಡಿದ ಸಚಿವರು, 2020ನೇ ವರ್ಷದ ಜೂನ್ ಬಳಿಕ ಜಾಗತಿಕ ಹೂಡಿಕೆದಾರರ ಸಮಾವೇಶ ಏರ್ಪಡಿಸುವುದಾಗಿಯೂ , ರಾಷ್ಟ್ರೀಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣವಾಗಿ ಜಾರಿಗೆ ಬರಲಿದೆ ಎಂದೂ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಯುಎನ್ಐ ಕೆಎಸ್ಆರ್ 2110