Wednesday, Feb 26 2020 | Time 08:08 Hrs(IST)
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಮೌಲ್ವಿ ಸೇರಿದಂತೆ ಇಬ್ಬರು ಭಯೋತ್ಪಾದನೆ ಶಂಕಿತರ ಬಂಧನ

ಚಾಮರಾಜನಗರ, ಜ 12(ಯುಎನ್‍ಐ)- ಭಯೋತ್ಪಾದಕರೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮೌಲ್ವಿ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಭಾನುವಾರ ಬಂಧಿಸಲಾಗಿದೆ.

‘ಕೇರಳದಲ್ಲಿ ಸಕ್ರಿಯವಾಗಿರುವ ಭಯೋತ್ಪಾದನೆ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಮೌಲ್ವಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.’ ಎಂದು ಚಾಮರಾಜ ನಗರ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬಂಧಿತರ ಹೆಸರುಗಳನ್ನು ಬಹಿರಂಗಗೊಳಿಸಲು ಇಚ್ಛಿಸದ ಪೊಲೀಸ್‍ ಅಧಿಕಾರಿ, ಬಂಧಿತರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಭಯೋತ್ಪಾದನೆ ನಿಗ್ರಹ ದಳ, ಆಂತರಿಕ ಭದ್ರತಾ ವಿಭಾಗ ಮತ್ತು ಜಿಲ್ಲಾ ಪೊಲೀಸರು ಜಂಟಿಯಾಗಿ ಶಂಕಿತರನ್ನು ಬಂಧಿಸಿದ್ದಾರೆ.

ಕೇರಳದಲ್ಲಿ ಸಕ್ರಿಯವಾಗಿರುವ ಮೂಲಭೂತ ಸಂಘಟನೆಗಳು ನೆರೆಯ ರಾಜ್ಯಗಳಿಗೂ ವ್ಯಾಪಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಕೇರಳ-ತಮಿಳುನಾಡು ಗಡಿಯಲ್ಲಿ ಮೂಲಭೂತ ಸಂಘಟನೆಯ ಮತೀಯವಾದಿಗಳು 56 ವರ್ಷದ ವಿಶೇಷ ಸಬ್‍ ಇನ್ಸ್‍ ಪೆಕ್ಟರ್ ಅನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇತ್ತೀಚಿನ ಮಂಗಳೂರು ಗಲಭೆಗಳಲ್ಲೂ ಕೇರಳದ ಗೂಂಡಾಗಳದ್ದೇ ದೊಡ್ಡ ಪಾತ್ರವಿದೆ ಎಂದು ವ್ಯಾಪಕವಾಗಿ ಕೇಳಿ ಬಂದಿದೆ.

ಯುಎನ್‍ಐ ಎಸ್‍ಎಲ್‍ಎಸ್ 2323