Monday, Jul 22 2019 | Time 07:05 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
Special Share

ಮೇವು ಹಗರಣ: ದಿಯೋಘರ್ ಖಜಾನೆ ಪ್ರಕರಣದಲ್ಲಿ ಲಾಲುಗೆ ಜಾಮೀನು

ಮೇವು ಹಗರಣ: ದಿಯೋಘರ್ ಖಜಾನೆ ಪ್ರಕರಣದಲ್ಲಿ ಲಾಲುಗೆ ಜಾಮೀನು
ಮೇವು ಹಗರಣ: ದಿಯೋಘರ್ ಖಜಾನೆ ಪ್ರಕರಣದಲ್ಲಿ ಲಾಲುಗೆ ಜಾಮೀನು

ರಾಂಚಿ, ಜು 12 (ಯುಎನ್ಐ) ಮೇವು ಹಗರಣದ ದಿಯೋಘರ್ ಖಜಾನೆ ಪ್ರಕರಣಕ್ಕೆ ಸಂಬಂಧಿಸಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ತಲಾ 50 ಸಾವಿರ ರೂಪಾಯಿಗಳ ಎರಡು ಬಾಂಡ್‌ಗಳ ಮೇಲೆ ನ್ಯಾಯಮೂರ್ತಿ ಅಪ್ರೇಶ್ ಕುಮಾರ್ ಸಿಂಗ್ ಅವರು ಜಾಮೀನು ಮಂಜೂರು ಮಾಡಿದರು. ಆದಾಗ್ಯೂ, ಲಾಲು ಅವರು ಇತರ ಕೆಲವು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವುದರಿಂದ ಅವರಿಗೆ ಜೈಲಿನಿಂದ ಹೊರಬರಲು ಸಾಧ್ಯವಾಗಿಲ್ಲ.

ದಿಯೋಘರ್ ಖಜಾನೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಜೂನ್ 13ರಂದು ಯಾದವ್, ಜಾರ್ಖಂಡ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಲಾಲು ಪ್ರಸಾದ್ ಯಾದವ್ ಅವರಿಗೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ, ಮೇವು ಹಗರಣದ ದುಮ್ಕಾ, ದಿಯೋಘರ್, ಚೈಬಾಸ ಖಜಾನೆ ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿತ್ತು.

89.72 ಲಕ್ಷ ರೂಪಾಯಿ ಅಕ್ರಮವಾಗಿ ಹಣ ಹಿಂಪಡೆದುಕೊಂಡ ದಿಯೋಘರ್ ಖಜಾನೆ ಪ್ರಕರಣಕ್ಕೆ ಸಂಬಂಧಿಸಿ 2017, ಡಿಸೆಂಬರ್ 23ರಂದು ನ್ಯಾಯಾಲಯ ಲಾಲು ಅವರನ್ನು ಅಪರಾಧಿ ಎಂದು ಪರಿಗಣಿಸಿ, 3.5 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಯುಎನ್ಐ ಎಎಚ್ ಎಸ್‌ಎಲ್‌ಎಸ್‌ 1720