Friday, Aug 7 2020 | Time 17:48 Hrs(IST)
 • ಲಾಕ್ ಡೌನ್ ಬಳಿಕ ಮೊದಲ ಬಾರಿ ಅಭ್ಯಾಸಕ್ಕಿಳಿದ ಸಿಂಧೂ
 • ಗಡಿಭಾಗದ ನೀರಿನ ಸಮಸ್ಯೆ ಪರಿಹರಿಸಲು ಆಂಧ್ರಪ್ರದೇಶದೊಂದಿಗೆ ನೀರು ಹಂಚಿಕೆ: ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್
 • ರಾಜ್ಯದಲ್ಲಿ ವರುಣನ ಆರ್ಭಟ: ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ರೆಡ್ ಅಲರ್ಟ್ ಘೋಷಣೆ
 • ಟೀಮ್‌ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡುವ ವಿಶ್ವಾಸ ಹೊರಹಾಕಿದ ಮಿಶ್ರಾ
 • ಕ್ವಾರಂಟೈನ್‌ ನಿಯಮ ಉಲ್ಲಂಘನೆ; ಪ್ರತಿ ಸಾವಿರ ವ್ಯಕ್ತಿಗೆ ಇಬ್ಬರ ಮೇಲೆ ಎಫ್‌ಐಆರ್‌ ದಾಖಲು
 • ಕಾಂಗ್ರೆಸ್‌-ಚೀನಾ ಸರ್ಕಾರದ ಒಡಂಬಡಿಕೆ ಸುಪ್ರೀಂಕೋರ್ಟ್‌ಗೆ ಕೂಡ ಅಚ್ಚರಿ ತಂದಿದೆ; ನಡ್ಡಾ
 • ಡಾ ಕೆ ಕಸ್ತೂರಿರಂಗನ್ ವಿವಾದಾತೀತರು: ತಪಸ್ಸಿನಂತೆ ನೂತನ ಶಿಕ್ಷಣ ನೀತಿ ರೂಪಿಸಿದ್ದಾರೆ: ಪ್ರಧಾನಿ ನರೇಂದ್ರ ಮೋದಿ
 • ಕೊಂಕಣ ರೈಲ್ವೆಯಿಂದ ರೈಲುಗಳ ಮಾರ್ಗ ಬದಲಾವಣೆ
 • ಕೇರಳದಲ್ಲಿ ಭಾರೀ ಭೂಕುಸಿತ: 10 ಮಂದಿ ಸಾವು, 85 ಮಂದಿ ನಾಪತ್ತೆ
 • ಕೊವಿಡ್‍: ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 68ಕ್ಕೆ ಏರಿಕೆ: ಸಾವಿನ ಪ್ರಮಾಣ ಶೇ2 05ಕ್ಕೆ ಇಳಿಕೆ
 • ಕೊಡಗು ಜಿಲ್ಲೆಯಲ್ಲಿ ಕೊರೊನಾಗೆ ಮಹಿಳೆ ಬಲಿ: ಸಾವಿನ ಸಂಖ್ಯೆ 11ಕ್ಕೇರಿಕೆ
 • ಗಾಂಜಾ ಮಾರಾಟ ಯತ್ನ: ಒಡಿಶಾ ಮೂಲದ ವ್ಯಕ್ತಿ ಬಂಧನ
 • ಧಾರವಾಡ: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಗಾಗಿ ಶೋಧ ಕಾರ್ಯ ಮುಂದುವರಿಕೆ
 • ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕ್‍ನಿಂದ ಕದನವಿರಾಮ ಉಲ್ಲಂಘನೆ: ಮೂವರು ನಾಗರಿಕರಿಗೆ ಗಾಯ
 • ಶಬನಮ್ ಡೆವಲಪರ್ಸ್ ನ ಶೂಟ್‍ಔಟ್ ಪ್ರಕರಣ; 13 ವರ್ಷ ಬಳಿಕ ಪ್ರಮುಖ ಆರೋಪಿ ಸೆರೆ
National Share

ಯೋಗ ದಿನ : ಮನೆಯಲ್ಲಿಯೇ ಸೂರ್ಯನಮಸ್ಕಾರ ಮಾಡಿ : ಪ್ರಹ್ಲಾದ್ ಸಿಂಗ್ ಪಟೇಲ್

ನವದೆಹಲಿ, ಜೂ 20 [ಯುಎನ್ಐ] ಅಂತಾರಾಷ್ತ್ರೀಯ ಯೋಗ ದಿನದಂದು ಎಲ್ಲರೂ ತಮ್ಮ ಮನೆಗಳಲ್ಲಿ ಸೂರ್ಯ ನಮಸ್ಕಾರ ಮಾಡುವ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸಬೇಕು ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಹಾಯಕ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ಯೋಗ ದಿನದ ಕೊಡುಗೆ ನೀಡಿದ್ದು, ನಾವು ನಮ್ಮ ದೈನಂದಿನ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ತಾವು ಪುರಾನಾ ಖಿಲಾದ ತಮ್ಮ ಮನೆಯಲ್ಲಿ ಸೂರ್ಯ ನಮಸ್ಕಾರ ಮಾಡಲಿದ್ದು, ಎಲ್ಲರೂ ಮನೆಯಲ್ಲಿಯೇ ಸೂರ್ಯ ನಮಸ್ಕಾರ ಮಾಡುವಂತೆ ಸಲಹೆ ಮಾಡಿದ್ದಾರೆ.
ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಸಂದೇಶವನ್ನು ಹಾಕಿದ್ದು, ಎಲ್ಲರಿಗೂ ಅವರವರ ಸೂರ್ಯ ನಮಸ್ಕಾರ ವೀಡಿಯೋವನ್ನು #10MillionSuryaNamaskar & #NamasteYoga ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಯೋಗ ಸಾರ್ವಜನಿಕ ಆಂದೋಲನವಾಗಿದ್ದು, ಇದು ಜೊತೆಗಾರ ನಾಗರಿಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತದೆ. ಸಂಸ್ಕೃತಿ ಸಚಿವರ ಸಂದೇಶಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಗ ದಿನದಂದು ಸೂರ್ಯ ನಮಸ್ಕಾರದಲ್ಲಿ ತಮ್ಮ ಜೊತೆ ಸುಮಾರು 10 ದಶಲಕ್ಷ ಜನ ಭಾಗವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯುಎನ್ಐ ವಿಎನ್ 2012