Sunday, Mar 29 2020 | Time 00:48 Hrs(IST)
National Share

ಯಾರು ಸುಳ್ಳುಗಾರ ದೇಶವೇ ತೀರ್ಮಾನಿಸಲಿ ರಾಹುಲ್ ಸವಾಲ್

ನವದೆಹಲಿ,ಡಿ 28 (ಯುಎನ್ಐ) ಭಾರತದಲ್ಲಿ ಎಲ್ಲಿಯೂ ಬಂಧನ ಕೇಂದ್ರ ಇಲ್ಲ ಎಂದು ಹೇಳುತ್ತಿರುವ ನರೇಂದ್ರ ಮೋದಿ ಅವರ ವಿಡಿಯೊವನ್ನು ಟ್ವೀಟ್ ಮಾಡಿರುವ ಯುವ ನಾಯಕ ಗಾಂಧಿ ಯಾರು ಸುಳ್ಳುಗಾರ ಎಂಬುದನ್ನು ದೇಶದ ಜನತೆ ನಿರ್ಧರಿಸಲಿ ಎಂದು ಬಿಜೆಪಿ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ರಾಹುಲ್ ಗಾಂಧಿ ಈ ವರ್ಷದ ಮಹಾ ಸುಳ್ಳುಗಾರ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಈ ಆರೋಪಕ್ಕೆ ರಾಹುಲ್ ಟ್ವಿಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಮಂತ್ರಿ ಮೋದಿ ಭಾರತ ಮಾತೆಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ, ದೇಶದಲ್ಲಿ ಎಲ್ಲಿಯೂ ಕೂಡ ಬಂಧನ ಕೇಂದ್ರ(ಡಿಟೆನ್ಶನ್ ಸೆಂಟರ್)ನಿರ್ಮಿಸಲಾಗಿಲ್ಲ ಎಂದು ವ್ಯತಿರಿಕ್ತ ಹೇಳಿಕೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಡಿಯೊವನ್ನು ಶೇರ್ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ .
ಯುಎನ್ಐ ಕೆಎಸ್ಆರ್ 1200
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..