Wednesday, Feb 26 2020 | Time 09:58 Hrs(IST)
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ರಕ್ಷಣಾ ಸಚಿವರನ್ನು ಭೇಟಿ ಮಾಡಿದ ನೂತನ ಸಿಡಿಎಸ್

ನವದೆಹಲಿ, ಜ1(ಯುಎನ್‍ಐ)- ಹೊಸದಾಗಿ ನೇಮಕಗೊಂಡಿರುವ ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಬುಧವಾರ ಇಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಬಿಪಿನ್ ರಾವತ್ ಅವರು ಸೌತ್ ಬ್ಲಾಕ್‍ನಲ್ಲಿ ರಾಜನಾಥ್ ಅವರ ಕಚೇರಿಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದರು ಎಂದು ರಕ್ಷಣಾ ಸಚಿವಾಲಯ ಟ್ವೀಟ್ ಮಾಡಿದೆ.
ತಮ್ಮ ಅಧಿಕಾರಾವಧಿಯಲ್ಲಿ ಯಶಸ್ಸುಗಳಿಸಲು ಜನರಲ್ ರಾವತ್ ಅವರಿಗೆ ರಕ್ಷಣಾ ಸಚಿವರು ಶುಭ ಹಾರೈಸಿದ್ದಾರೆ.
ಕಳೆದ ವಾರ ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಹುದ್ದೆಯನ್ನು ಸರ್ಕಾರ ಸೃಷ್ಟಿಸಿದ್ದು, ರಾವತ್ ಅವರು, ಈ ಉನ್ನತ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲಿಗರಾಗಿದ್ದಾರೆ. ಡಿ 31ರಂದು ಸೇನಾ ಮುಖ್ಯಸ್ಥ ಹುದ್ದೆಗೆ ರಾವತ್ ರಾಜೀನಾಮೆ ನೀಡಿದ್ದರು.
ಸೇನೆಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರಕ್ಕೆ ಸಲಹಾಗಾರರಾಗಿ ಕಾರ್ಯನಿರ್ವಹಿಸಲಿರುವ ಅವರು, ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಗಳ ನಡುವೆ ಹೆಚ್ಚಿನ ಸಮನ್ವಯತೆಗೆ ಗಮನಹರಿಸಲಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1503