Wednesday, Feb 26 2020 | Time 10:42 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
Special Share

ರಜನಿಕಾಂತ್ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದ ಆರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ರಜನಿಕಾಂತ್  ವಿರುದ್ದ  ಕ್ರಮಕ್ಕೆ ಆಗ್ರಹಿಸಿದ್ದ  ಆರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್
ರಜನಿಕಾಂತ್ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದ ಆರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ, ಜ ೨೪( ಯುಎನ್‌ಐ) ದ್ರಾವಿಡ ಸಿದ್ಧಾಂತವಾದಿ ಇ.ವಿ. ರಾಮಸ್ವಾಮಿ ಪೆರಿಯಾರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ವಿರುದ್ಧ ಕ್ರಮ ಜರುಗಿಸಲು ಚೆನ್ನೈ ಪೊಲೀಸರಿಗೆ ತಾಕೀತು ಮಾಡುವಂತೆ 'ದ್ರಾವಿಡಾರ್ ವಿಡುದಲೈ ಕಳಗಂ’ (ಡಿವಿಕೆ) ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೋಗದೆ ನೇರವಾಗಿ ಹೈಕೋರ್ಟ್‌ಗೆ ಬರುವ ತುರ್ತಾದರೂ ಏನಿತ್ತು ? ಎಂದು ಕೋರ್ಟ್ ಆರ್ಜಿದಾರರನ್ನು ಪ್ರಶ್ನಿಸಿದೆ.



ಇತ್ತೀಚಿಗೆ ಚೆನ್ನೈನಲ್ಲಿ ನಡೆದ ತಮಿಳು ಪತ್ರಿಕೆ ’ತುಘಲಕ್’ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ರಜನಿಕಾಂತ್ ಭಾಗವಹಿಸಿದ್ದರು. ೧೯೭೧ ರಲ್ಲಿ ಪೆರಿಯಾರ್ ನೇತೃತ್ವದಲ್ಲಿ ಸೇಲಂನಲ್ಲಿ ನಡೆದಿದ್ದ ಮೂಢನಂಭಿಕೆ ವಿರೋಧಿ ಸಭೆಯಲ್ಲಿ ಭಗವಾನ್ ಶ್ರೀರಾಮ ಹಾಗೂ ಸೀತೆಯ ಬೆತ್ತಲೆ ಪ್ರತಿಕೃತಿಗಳಿಗೆ ಪಾದರಕ್ಷೆ ಹಾರ ಹಾಕಿ ಮೆರವಣಿಗೆ ನಡೆಸಲಾಗಿತ್ತು ಎಂದು ರಜನಿಕಾಂತ್ ತಮ್ಮ ಭಾಷಣದಲ್ಲಿ ಹೇಳಿದ್ದರು. ಈ ಘಟನೆಯನ್ನು ಅಂದಿನ ಕಾಲದಲ್ಲೇ ತುಘಲಕ್ ಸಂಸ್ಥಾಪಕ ಸಂಪಾದಕ ದಿ. ಚೋ ರಾಮಸ್ವಾಮಿ ಕೂಡ ಖಂಡಿಸಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದರು ಎಂದು ರಜನಿ ಹೇಳಿದ್ದರು.



ರಜನೀಕಾಂತ್ ಹೇಳಿಕೆಗೆ ದ್ರಾವಿಡರ್ ವಿಡುದಲೈ ಕಳಗಂ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಜನವರಿ ೧೮ ರಂದು ಟ್ರಿಪ್ಲಿಕೇನ್ ಪೊಲೀಸ್ ಠಾಣೆಯಲ್ಲಿ ರಜನಿಕಾಂತ್ ವಿರುದ್ದ ದೂರು ದಾಖಲಿಸಿತ್ತು. ದೂರು ಸ್ವೀಕಾರ ಸಂಬಂಧ ಸ್ವೀಕೃತಿ ಪತ್ರ ನೀಡಲು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಚೆನ್ನೈ ಜಿಲ್ಲಾ ಕಾರ್ಯದರ್ಶಿ ಉಮಾಪತಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಡಿವಿಕೆ ಪಕ್ಷ ಹೈಕೋರ್ಟ್‌ಗೆ ಮೊರೆ ಹೋಗಿತ್ತು, ರಜನಿ ಕಾಂತ್ ತಮಿಳುನಾಡಿನ ಜನರನಡುವೆ ದ್ವೇಷ ಪ್ರಚೋದಿಸಲು ಹಾಗೂ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ರಜನೀಕಾಂತ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶ ನೀಡುವಂತೆ ನ್ಯಾಯಾಲಯವನ್ನು ಕೋರಿತ್ತು.

ಈ ನಡುವೆ ತಮಿಳುನಾಡಿನ ಚೆಂಗಲ್ಪಟ್ಟು ರಸ್ತೆಯ ವೃತ್ತದಲ್ಲಿದ್ದ ಪೆರಿಯಾರ್ ಪ್ರತಿಮೆಯನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಯುಎನ್‌ಐ ಕೆವಿಆರ್ ೧೪೦೭