Wednesday, Feb 26 2020 | Time 09:48 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ರಜನೀಕಾಂತ್ ವಿರುದ್ಧ ಪ್ರತಿಭಟನೆ: ನಟನ ನಿವಾಸಕ್ಕೆ ಮೂರು ಸ್ತರದ ಭದ್ರತೆ

ಚೆನ್ನೈ, ಜ 22(ಯುಎನ್‍ಯ)- ವಿಚಾರವಾದ ನಾಯಕ ಪೆರಿಯಾರ್ ವಿರುದ್ಧ ಹೇಳಿಕೆ ನೀಡಿರುವ ರಜನೀಕಾಂತ್ ಕ್ಷಮೆ ಕೋರಬೇಕೆಂದು ಒತ್ತಾಯಿಸಿ ದ್ರಾವಿಡ ಪರ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಯೀಸ್ ಗಾರ್ಡನ್ ನಲ್ಲಿರುವ ನಟನ ನಿವಾಸಕ್ಕೆ ಮೂರು ಸ್ಥರದ ಭದ್ರತೆ ಒದಗಿಸಲಾಗಿದೆ.
ಈ ಮಧ್ಯೆ, ಪೆರಿಯಾರ್ ದ್ರಾವಿಡ ಕಳಗಂ ಸದಸ್ಯರು ರಜನೀಕಾಂತ್ ನಿವಾಸಕ್ಕೆ ಒಂದು ಕಿ.ಮೀ ದೂರದ ಸೆಮ್ಮೊಳಿ ಪೂಂಗದಲ್ಲಿ ಜಮಾಯಿಸಿ, ರಜನೀಕಾಂತ್ ವಿರುದ್ಧ ಘೋಷಣೆಗಳನ್ನು ಕೂಗಿದರು.
1971ರಲ್ಲಿ ಸೇಲಂನಲ್ಲಿ ಆಯೋಜಿಸಲಾಗಿದ್ದ ಮೆರವಣಿಗೆಯಲ್ಲಿ ಶ್ರೀರಾಮ ಮತ್ತು ಸೀತೆಯ ಮೂರ್ತಿಗಳಿಗೆ ಚಪ್ಪಲಿ ಹಾರ ಹಾಕಿರುವ ಕುರಿತಂತೆ ನೀಡಿರುವ ಹೇಳಿಕೆಯನ್ನು ರಜನೀಕಾಂತ್ ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಫಲಕಗಳನ್ನು ಹಿಡಿದು ನಟನ ನಿವಾಸದತ್ತ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ರಜನೀಕಾಂತ್ ಕ್ಷಮೆ ಯಾಚಿಸುವವರೆಗೆ ಪ್ರತಿಭಟನೆಗಳು ಮುಂದುವರೆಯಲಿವೆ ಎಂದು ಪ್ರತಿಭಟನೆಕಾರರು ಹೇಳಿದ್ದಾರೆ.
ಹೇಳಿಕೆ ನೀಡಿರುವುದಕ್ಕೆ ತಾವು ವಿಷಾದ ವ್ಯಕ್ತಪಡಿಸುವುದಿಲ್ಲ. ಇಲ್ಲವೇ ಕ್ಷಮೆ ಯಾಚಿಸುವುದೂ ಇಲ್ಲ ಇಲ್ಲ ಎಂದು ರಜನೀಕಾಂತ್ ನಿನ್ನೆ ಹೇಳಿರುವುದನ್ನು ಇಲ್ಲಿ ಗಮನಿಸಬಹುದು.
ಯುಎನ್‍ಐ ಎಸ್‍ಎಲ್‍ಎಸ್ 1650