Monday, Jun 1 2020 | Time 02:48 Hrs(IST)
International Share

ರಷ್ಯಾದ ಆಸ್ಪತ್ರೆಯಲ್ಲಿ ಬೆಂಕಿ ದುರಂತ: ಮೂವರ ದಾರುಣ ಸಾವು

ನಿಜ್ನಿ ನವ್ಗೊರೊಡ್, ರಷ್ಯಾ ಮೇ 23 (ಯುಎನ್ಐ) ರಷ್ಯಾದ ಟಾಟರ್ಸ್ತಾನ್ ಗಣರಾಜ್ಯದ ಇಲೆ ನೊಡಾಲ್ಸ್ಕ್ ಪಟ್ಟಣದ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ , ಮೂವರು ಸಾವನ್ನಪ್ಪಿದ್ದಾರೆ.
ಈ ದುರ್ಘಟನೆಯಲ್ಲಿ ಇತರೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಆರೋಗ್ಯ ಸಚಿವಾಲಯದ ವಕ್ತಾರರು ಶನಿವಾರ ಸ್ಪುಟ್ನಿಕ್ ಗೆ ತಿಳಿಸಿದ್ದಾರೆ.
ಶುಕ್ರವಾರ ಆಸ್ಪತ್ರೆಯ ಹೃದಯರಕ್ತನಾಳದ ಆರೈಕೆ ಘಟಕಕ್ಕೆ ಬೆಂಕಿ ತಗುಲಿತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಪ್ರಾದೇಶಿಕ ತುರ್ತು ಸೇವೆಗಳ ಪ್ರಕಾರ,ನಂತರ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ನಂತರ, ಆರೋಗ್ಯ ಸಚಿವಾಲಯವು ಆಸ್ಪತ್ರೆಗೆ ದಾಖಲಾದ ಇಬ್ಬರು ಸುಟ್ಟಗಾಯಗಳಿಂದ ಮತ್ತೊಬ್ಬರು ಇಂಗಾಲದ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆಎಂದು ವಕ್ತಾರರು ತಿಳಿಸಿದ್ದಾರೆ.
ಆದರೆ ಘಟನೆಯ ಕಾರಣಗಳು ಇನ್ನೂನಿಖರವಾಗಿ ತಿಳಿದು ಬಂದಿಲ್ಲ
ಯುಎನ್ಐ ಕೆಎಸ್ಆರ್ 0838
More News
ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

31 May 2020 | 6:08 PM

ನವದೆಹಲಿ, ಮೇ 31 (ಯುಎನ್ಐ)- ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ವಿಶ್ವದಲ್ಲಿ 60 ಲಕ್ಷದಾಟಿದ್ದು, 3.64 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

 Sharesee more..
ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

31 May 2020 | 5:31 PM

ವಾಷಿಂಗ್ಟನ್ /ನವದೆಹಲಿ, ಮೇ 31 (ಯುಎನ್ಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನಡೆಯಬೇಕಿದ್ದ ಜಿ7 ಶೃಂಗ ಸಭೆಯನ್ನು ಮುಂದೂಡಿದ್ದು, ಅದನ್ನು 'ಔಟ್ ಡೇಟೆಟ್' ಎಂದು ಕರೆದಿದ್ದಾರೆ. ಜೊತೆಗೆ, ಜಿ 7 ತಂಡದಲ್ಲಿ ಭಾರತ, ಆಸ್ಟ್ರೇಲಿಯಾ, ರಷ್ಯಾ ಮತ್ತು ದಕ್ಷಿಣ ಕೊರಿಯಾವನ್ನು ಸೇರಿಸಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.

 Sharesee more..