Wednesday, Jan 29 2020 | Time 13:36 Hrs(IST)
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
 • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
 • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
 • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
 • ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅಧಿಕಾರ ಸ್ವೀಕಾರ
 • ನಿರ್ಭಯ ಪ್ರಕರಣ; ತಪ್ಪಿತಸ್ಥ ಮುಖೇಶ್ ಆರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
 • ಇರ್ಫಾನ್ ಪಠಾಣ್ ಮೊದಲ ಓವರ್ ಹ್ಯಾಟ್ರಿಕ್ ಸಾಧನೆಗೆ ಇದೀಗ 14 ವರ್ಷ
 • ನಿರ್ಭಯಾ ಪ್ರಕರಣ, ಅಪರಾಧಿ ಮುಖೇಶ್ ಮನವಿ ತಿರಸ್ಕೃತ
Karnataka Share

ರಾಜ್ಯದಲ್ಲಿ ಜಿ.ಎಸ್.ಟಿ. ತೆರಿಗೆ ವಂಚನೆ ಮೊತ್ತದ ಪ್ರಮಾಣ ಈ ಬಾರಿ ದುಪ್ಪಟ್ಟುಗೊಳ್ಳಲಿದೆ: ಎ.ಪಿ. ನಾಗೇಂದ್ರ ಕುಮಾರ್

ರಾಜ್ಯದಲ್ಲಿ ಜಿ.ಎಸ್.ಟಿ. ತೆರಿಗೆ ವಂಚನೆ ಮೊತ್ತದ ಪ್ರಮಾಣ ಈ ಬಾರಿ ದುಪ್ಪಟ್ಟುಗೊಳ್ಳಲಿದೆ: ಎ.ಪಿ. ನಾಗೇಂದ್ರ ಕುಮಾರ್
ರಾಜ್ಯದಲ್ಲಿ ಜಿ.ಎಸ್.ಟಿ. ತೆರಿಗೆ ವಂಚನೆ ಮೊತ್ತದ ಪ್ರಮಾಣ ಈ ಬಾರಿ ದುಪ್ಪಟ್ಟುಗೊಳ್ಳಲಿದೆ: ಎ.ಪಿ. ನಾಗೇಂದ್ರ ಕುಮಾರ್

ಬೆಂಗಳೂರು, ಡಿ 7 [ಯುಎನ್ಐ] ರಾಜ್ಯದಲ್ಲಿ ಸರಕು ಮತ್ತು ಸೇವಾ ತೆರಿಗೆ - ಜಿ.ಎಸ್.ಟಿ ಯಲ್ಲಿ ತೆರಿಗೆ ವಂಚಿಸುತ್ತಿರುವ ಪ್ರಕರಣಗಳನ್ನು ಅತ್ಯಂತ ವ್ಯವಸ್ಥಿತವಾಗಿ ಪತ್ತೆ ಮಾಡುತ್ತಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ 1600 ಕೋಟಿ ರೂ ಮೊತ್ತದಷ್ಟು ವಂಚನೆ ಪತ್ತೆ ಮಾಡುವ ನಿರೀಕ್ಷೆಯಿದೆ ಎಂದು ಬೆಂಗಳೂರು ಜಿ.ಎಸ್.ಟಿ. ವಲಯದ ಪ್ರಧಾನ ಮುಖ್ಯ ಆಯುಕ್ತ ಎ.ಪಿ. ನಾಗೇಂದ್ರ ಕುಮಾರ್ ಹೇಳಿದ್ದಾರೆ.

ಕಳೆದ ವರ್ಷ 800 ಕೋಟಿ ರೂ ಮೊತ್ತದ ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ಇದರಲ್ಲಿ 300 ಕೋಟಿ ತೆರಿಗೆ ವಸೂಲಿ ಮಾಡಲಾಗಿತ್ತು. ಈ ವರ್ಷ ಈ ಪ್ರಮಾಣ ದ್ವಿಗುಣಗೊಳ್ಳಲಿದೆ. ತೆರಿಗೆ ವಂಚನೆಯ ಮೇಲೆ ಸದಾ ನಿಗಾ ಇಡುತ್ತಿದ್ದು, ಪ್ರತಿಯೊಂದು ಹಂತದಲ್ಲೂ ಕಣ್ಗಾವಲು ಬಿಗಿಗೊಳಿಸಲಾಗಿದೆ ಎಂದರು.

ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಜಾರಿಗೆ ಬಂದು 28 ತಿಂಗಳು ಕಳೆದಿದ್ದು, ಈ ವರೆಗೆ ದೇಶದಲ್ಲಿ 90 ಸಾವಿರ ಕೋಟಿ ರೂ ಮೊತ್ತದ ತೆರಿಗೆ ವಂಚನೆ ಪತ್ತೆ ಮಾಡಲಾಗಿದೆ. ವಂಚನೆ ಪತ್ತೆಗೆ ವಿವಿಧ ಇಲಾಖೆಗಳ ಸಹಕಾರ ಪಡೆಯಲಾಗುತ್ತಿದೆ ಎಂದರು.

ಬೆಂಗಳೂರಿನ ಟರ್ಫ್ ಕ್ಲಬ್ ನಲ್ಲಿ ಬೆಟ್ಟಿಂಗ್ ಸಂದರ್ಭದಲ್ಲಿ ತೆರಿಗೆ ವಂಚಿಸುತ್ತಿದ್ದ ಪ್ರಕರಣವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿರುವ ವಿಚಾರ ಇನ್ನೂ ಅಧಿಕೃತವಾಗಿ ನಮ್ಮ ಗಮನಕ್ಕೆ ಬಂದಿಲ್ಲ. ಆದರೆ ತೆರಿಗೆ ವಂಚನೆ ಮಾಹಿತಿ ಲಭ್ಯವಾಗಿದೆ. ಕಳೆದ ತಿಂಗಳು ಟರ್ಫ್ ಕ್ಲಬ್ ನ್ಯಾಯಾಲಯದ ಸೂಚನೆ ಮೇರೆಗೆ 140 ಕೋಟಿ ರೂ ಮೊತ್ತದ ಜಿ.ಎಸ್.ಟಿ. ತೆರಿಗೆ ಪಾವತಿಸಿತ್ತು. ಜೂಜಾಟದ ಮೇಲೂ ತೆರಿಗೆ ಇದ್ದು. ಅದನ್ನು ಪಾವತಿ ಮಾಡುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಈ ವೇ ಬಿಲ್ ವ್ಯವಸ್ಥೆ ಜಾರಿಗೆ ಬಂದ ನಂತರ ಚೆಕ್ ಪೋಸ್ಟ್ ಗಳ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗಿದೆ. 50 ಸಾವಿರ ರೂ ಗಿಂತ ಹೆಚ್ಚಿನ ಮೊತ್ತದ ಸರಕು ಸಾಗಾಣೆ ಮಾಡುವಾಗ ಕಡ್ಡಾಯವಾಗಿ ಇ ವೇ ಬಿಲ್ ತೆಗೆದುಕೊಂಡು ಹೋಗಬೇಕು ಎಂದು ಸಲಹೆ ಮಾಡಿದರು.

ಬರುವ 2020 ರಿಂದ ದೇಶಾದ್ಯಂತ ಜಿ.ಎಸ್.ಟಿ. ರಿಟರ್ನ್ ಸಲ್ಲಿಸುವ ವ್ಯವಸ್ಥೆಯನ್ನು ಸರಳಗೊಳಿಸುತ್ತಿದ್ದು, ಇದಕ್ಕಾಗಿ ಹೊಸ ಸಂಪರ್ಕ ಜಾಲ ಸಿದ್ಧಪಡಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನದ ಮೇರೆಗೆ ಇಂದಿನಿಂದ ಹೊಸ ಸರಳೀಕೃತ ವ್ಯವಸ್ಥೆಯನ್ನು ಪ್ರಯೋಗಿಕವಾಗಿ ಬಳಕೆಗೆ ಅವಕಾಶ ಮಾಡಿಕೊಡಲಾಗಿತ್ತು. ಇದು ಅತ್ಯಂತ ಸುಸಜ್ಜಿತ ತಂತ್ರಾಂಶವಾಗಿದೆ ಎಂದರು.

ಬೆಂಗಳೂರಿನ ಎಂಟು ಕೇಂದ್ರಗಳು ಸೇರಿದಂತೆ ರಾಜ್ಯದ ಹಲವು ಕೇಂದ್ರಗಳಲ್ಲಿ ಜಿ.ಎಸ್.ಟಿ. ರಿಟರ್ನ್ ಸಲ್ಲಿಸುವ ಹೊಸ ವ್ಯವಸ್ಥೆಗೆ ಶೇ 70 ರಷ್ಟು ಮಂದಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಾರೆ 2150 ಮಂದಿ ಈ ಕೇಂದ್ರಗಳಿಗೆ ಭೇಟಿ ನೀಡಿದ್ದು, 1350 ಮಂದಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನೀಡಿರುವ ಸಲಹೆಗಳನ್ನು ಪರಿಗಣಿಸಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎ.ಪಿ. ನಾಗೇಂದ್ರ ಕುಮಾರ್ ತಿಳಿಸಿದರು.

ಹೊಸ ಸುಧಾರಿತ ಜಿ.ಎಸ್.ಟಿ. ರಿಟರ್ನ್ ಸಲ್ಲಿಸುವ ಪ್ರಕ್ರಿಯೆಯಲ್ಲಿ ಸರಳತೆಗೆ ಒತ್ತು ನೀಡಿದ್ದು, ಕೊನೆ ಹಂತದಲ್ಲಿ ರಿಟರ್ನ್ ಸಲ್ಲಸುವ ಸಂದರ್ಭದಲ್ಲೂ ಹ್ಯಾಂಗ್ ಅಥವಾ ಜಾಮ್ ಆಗುವುದಿಲ್ಲ. ರಾಜ್ಯದಲ್ಲಿ ಒಟ್ಟು 9 ಲಕ್ಷ ಮಂದಿ ಜಿ.ಎಸ್.ಟಿ. ವ್ಯಾಪ್ತಿಯಲ್ಲಿ ನೋಂದಣಿಯಾಗಿದ್ದು, ಇವರ ರಿಟರ್ನ್ ಸಲ್ಲಿಸುವ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಯುಎನ್ಐ ವಿಎನ್ 1943