Friday, Feb 28 2020 | Time 09:39 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ರಾಜ್ಯ ಕಾಂಗ್ರೆಸ್ ನಾಯಕತ್ವ ಕುರಿತು ರಾಹುಲ್ ಗಾಂಧಿ ಭೇಟಿಯಾಗಿ ಅಭಿಪ್ರಾಯ ತಿಳಿಸಿದ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್ ನಾಯಕತ್ವ ಕುರಿತು ರಾಹುಲ್ ಗಾಂಧಿ ಭೇಟಿಯಾಗಿ ಅಭಿಪ್ರಾಯ ತಿಳಿಸಿದ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ ನಾಯಕತ್ವ ಕುರಿತು ರಾಹುಲ್ ಗಾಂಧಿ ಭೇಟಿಯಾಗಿ ಅಭಿಪ್ರಾಯ ತಿಳಿಸಿದ ಸಿದ್ದರಾಮಯ್ಯ

ನವದೆಹಲಿ, ಜನವರಿ 15 (ಯುಎನ್‌ಐ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಇತರ ಹಿರಿಯ ಮುಖಂಡರನ್ನು ಭೇಟಿಯಾದ ಒಂದು ದಿನದ ನಂತರ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಪಕ್ಷದ ರಾಜ್ಯ ಘಟಕದಲ್ಲಿ ನಡೆಯುತ್ತಿರುವ ನಾಯಕತ್ವ ಬಿಕ್ಕಟ್ಟು ಕುರಿತು ಚರ್ಚೆ ನಡೆಸಿದರು.

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರನ್ನೂ ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಮಂಗಳವಾರ ಸಿದ್ದರಾಮಯ್ಯ ಅವರು ಪಕ್ಷದ ಹಿರಿಯ ನಾಯಕರಾದ ಅಹ್ಮದ್ ಪಟೇಲ್, ಎ.ಕೆ.ಆಂಟನಿ ಅವರನ್ನೂ ಭೇಟಿಯಾಗಿ ರಾಜ್ಯದ ನಾಯಕತ್ವ ಬಿಕ್ಕಟ್ಟು ಕುರಿತು ಚರ್ಚಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗಾಯತ ನಾಯಕರಾಗಿರುವ ಎಂ.ಬಿ.ಪಾಟೀಲ್ ಅವರು ಬಿಜೆಪಿಯ ಭದ್ರಕೋಟೆಯಾಗಿರುವ ಉತ್ತರ ಕರ್ನಾಟಕದವರಾಗಿದ್ದು, ಅವರ ನೇಮಕದಿಂದ ಲಿಂಗಾಯತರನ್ನು ಪಕ್ಷಕ್ಕೆ ಸೆಳೆಯಲು ಸಾಧ್ಯವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ಪ್ರತಿಸ್ಪರ್ಧಿ ಎಂದೇ ಹೇಳಲಾಗುವ ಮಾಜಿ ಸಚಿವ ಮತ್ತು ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಕೂಡ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಇನ್ನೂ ಅಂಗೀಕರಿಸಿಲ್ಲ.

ಸಿದ್ದರಾಮಯ್ಯ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಯುಎನ್ಐ ಎಎಚ್ 2121