Wednesday, Feb 26 2020 | Time 10:37 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ಬೆಂಗಳೂರು, ಜ 3(ಯುಎನ್‍ಐ)- ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು(ಆಶಾ) ಶುಕ್ರವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ್ದಾರೆ.
ಮಾಸಿಕ ಗೌರವಧನವನ್ನು 12,000 ರೂ.ಗೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರುವ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯಾದ ಎಲ್ಲೆಡೆಯಿಂದ ಆಗಮಿಸಿದ್ದ ಕಾರ್ಯಕರ್ತೆಯರು ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ಮೆರವಣಿಗೆ ನಡೆಸಿದರು.
ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಸೋಮವಾರ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಸರ್ಕಾರದ ಸ್ಪಂದನೆಗೆ ಅತೃಪ್ತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಒಕ್ಕೂಟದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಹೇಳಿದ್ದಾರೆ.
‘ಆರೋಗ್ಯ ಸಚಿವರೊಂದಿಗೆ ನಾಲ್ಕನೇ ಭೇಟಿ ಇದಾಗಿದ್ದು, ಸರ್ಕಾರದಿಂದ ಸುಳ್ಳು ಭರವಸೆಗಳೇ ದೊರೆಯುತ್ತಿವೆ. ಬೆಂಗಳೂರಿನಲ್ಲಿ ನಾವು ಅಹೋರಾತ್ರಿ ಧರಣಿ ನಡೆಸುತ್ತೇವೆ. ಬೇಡಿಕೆಗಳು ಈಡೇರುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ.’ ಎಂದು ನಾಗಲಕ್ಷ್ಮಿ ಹೇಳಿದ್ದಾರೆ.
ಭಾರೀ ಪ್ರತಿಭಟನಾ ಮೆರವಣಿಗೆಯಿಂದ ಮೆಜೆಸ್ಟಿಕ್ ಸುತ್ತಮುತ್ತ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿತ್ತು.
ಯುಎನ್‍ಐ ಎಸ್‍ಎಲ್‍ಎಸ್ 1613