Wednesday, Feb 26 2020 | Time 09:38 Hrs(IST)
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Karnataka Share

ರೇಣುಕಾಚಾರ್ಯ ವಿರುದ್ಧ ಇಮ್ರಾನ್ ಪಾಷಾ ವಾಗ್ದಾಳಿ

ಬೆಂಗಳೂರು, ಜ‌. 23(ಯುಎನ್ಐ) ಮುಸ್ಲಿಮರ ಬಗ್ಗೆ ಇನ್ನಮುಂದೆ ರೇಣುಕಾಚಾರ್ಯ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಬಿಬಿಎಂಪಿ ಜೆಡಿಎಸ್ ಸದಸ್ಯ ಇಮ್ರಾನ್ ಪಾಷಾ ಎಚ್ಚರಿಸಿದ್ದಾರೆ.
ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಚಿವ ರೇಣುಕಾಚಾರ್ಯ ವಿರುದ್ಧ ಕಿಡಿಕಾರಿದ ಬಿಬಿಎಂಪಿ ಜೆಡಿಎಸ್ ಸದಸ್ಯ ಇಮ್ರಾನ್ ಪಾಷಾ, ಮಸೀದಿಯಲ್ಲಿ ಮುಸ್ಲಿಮರು ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುತ್ತಾರೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನರ್ಸಿಂಗ್ ಮಿನಿಸ್ಟರ್ ರೇಣುಕಾಚಾರ್ಯ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಸಚಿವ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಬೇಕೇ ವಿನಃ ಹಗುರ ನಡತೆಯನ್ನಲ್ಲ ಎಂದು ಎಚ್ಚರಿಸಿದರು.
ನಾವು ತಲೆತಲಾಂತರದಿಂದ ಈ ಭಾರತದಲ್ಲಿಯೇ ವಾಸಮಾಡಿಕೊಂಡು ಬಂದಿದ್ದೇವೆ. ಇಲ್ಲಿಯೇ ನಮ್ಮ ಬದುಕನ್ನು ಕಟ್ಟಿಕೊಂಡಿದ್ದೇವೆ. ಮೂಲ ಕೊಡಿ ಎಂದು ಕೇಳಿದರೆ ಎಲ್ಲಿಂದ ಕೊಡುವುದು? ಎಂದು ಮೇಲ್ಮನೆ ಸದಸ್ಯ ಬಿ.ಎಂ.ಫಾರುಖ್ ಖಾನ್ ಪ್ರಶ್ನಿಸಿದ್ದಾರೆ.
ನಮ್ಮ ತಂದೆತಾಯಿಯ ಹುಟ್ಟಿಗೆ ದಾಖಲೆ ಕೇಳುವಂತಹ ಪರಿಸ್ಥಿತಿ ಈ‌ ಕೇಂದ್ರ ಸೃಷ್ಟಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ದೇಶದಲ್ಲಿ ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳಿವೆ‌. ಸಮಸ್ಯೆಗಳಿಗೆ ಸರ್ಕಾರ ಪರಿಹಾರ ಕೊಡುವುದನ್ನು ಬಿಟ್ಟು ಜನವಿರೋಧಿ ನೀತಿ ಹೇರುವ ಮೂಲಕ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸಿಎಎ ವಿರುದ್ಧ ಜೆಡಿಎಸ್ ನಿಲುವು ಸ್ಪಷ್ಟವಾಗಿದೆ ಎಂದರು‌.
ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಮತ್ತಿತರರು ಮಾತನಾಡಿದರು.
ಯುಎನ್ಐ ಯುಎಲ್ ಎಎಚ್ 2207