Monday, Jul 22 2019 | Time 20:20 Hrs(IST)
 • ಸೋನಿಯಾ, ರಾಹುಲ್‌ ಕುರಿತು ಟೀಕೆ: ಸತ್‌ ಪಾಲ್‌ ವಿರುದ್ಧ ಬಾಲಿ ಆಕ್ರೋಶ
 • ಆರ್ ಟಿಐ ಮಸೂದೆಗೆ ಕಾಂಗ್ರೆಸ್ ವಿರೋಧ; ಹಿಂಪಡೆಯುವಂತೆ ಒತ್ತಾಯ
 • ಚಂದ್ರಯಾನ್-2ಕ್ಕೆ ಭಾರತೀಯ ಉಕ್ಕು ಪ್ರಾಧಿಕಾರದ ವಿಶೇಷ ಲೋಹ ಬಳಕೆ
 • ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಲ್ ರಾಜ್ ಮಿಶ್ರಾ ಪ್ರಮಾಣವಚನ
 • ವಿಧಾನಸಭೆಯಲ್ಲಿ ಲಿಂಬಾವಳಿ ಕಣ್ಣೀರು
 • ದಾಖಲೆ ನಿರ್ಮಿಸಿದ ಅಮರನಾಥ ಯಾತ್ರೆ; 22 ದಿನಗಳಲ್ಲಿ 2 85 ಲಕ್ಷ ಯಾತ್ರಿಕರ ಭೇಟಿ
 • ಪ್ರದರ್ಶನ ಅಥವಾ ರವಾನೆ ಸರಕುಗಳ ಮೇಲಿನ ಸಂಯೋಜಿತ ತೆರಿಗೆ ಐಜಿಎಸ್‌ಟಿ ರದ್ದು
 • ಕ್ರಿಪ್ಟೋ ಕರೆನ್ಸಿ ಮೇಲೆ ನಿಷೇಧ ವಿಧಿಸಲು ಸರ್ಕಾರ ನೇಮಿಸಿದ್ದ ಸಮಿತಿ ಸಲಹೆ
 • ಕಾಶ್ಮೀರದ ದೋಡಾದಲ್ಲಿ ಉಗ್ರರ ಅಡಗುದಾಣ ನಾಶ
 • ವಿಧಾನಸಭೆಯಲ್ಲಿ ಸದ್ದುಮಾಡಿದ ಝೀರೋ ಟ್ರಾಫಿಕ್
 • ಟಿವಿಎಸ್‌ ಮಾರಾಟ ಶೇ 7 8ರಷ್ಟು ಏರಿಕೆ
 • ಕಳೆದ 3 ವರ್ಷದಲ್ಲಿ ಭಾರತೀಯ ನೌಕಾ ಸಿಬ್ಬಂದಿ ಸಂಖ್ಯೆ ಜಾಗತಿಕವಾಗಿ ಶೇ 45ರಷ್ಟು ಏರಿಕೆ
 • ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್
 • ಕ್ಸಿಯೋಮಿಯಿಂದ ರೆಡ್‌ಮಿ ಕೆ 20 ಸರಣಿ, ರೆಡ್‌ಮಿ 7 ಎ ಸ್ಮಾರ್ಟ್‌ಪೋನ್ ಬಿಡುಗಡೆ
 • ಸುಪ್ರಿಂಕೋರ್ಟ್ ತೀರ್ಪು ಬರುವತನಕ ವಿಶ್ವಾಸಮತ ಮುಂದೂಡಬೇಕು : ದಿನೇಶ್ ಗುಂಡೂರಾವ್
Parliament Share

ರೈತರ ಸಮಸ್ಯೆ: ಲೋಕಸಭೆಯಲ್ಲಿ ರಾಜನಾಥ್, ರಾಹುಲ್ ಜಟಾಪಟಿ

ನವದೆಹಲಿ, ಜುಲೈ 11 (ಯುಎನ್ಐ) ದೇಶಾದ್ಯಂತ ರೈತಾಪಿ ವರ್ಗ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಲೋಕಸಭೆಯಲ್ಲಿ ಗುರುವಾರ ಆಡಳಿತ ಹಾಗೂ ವಿಪಕ್ಷದ ನಡುವೆ ಜಟಾಪಟಿ ನಡೆಯಿತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆರೋಪವನ್ನು ಬಲವಾಗಿ ನಿರಾಕರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ಕಾರವನ್ನು ಸಮರ್ಥಿಸಿಕೊಂಡರು
“ಈ ಸಾಲಿನ ಬಜೆಟ್ ನಲ್ಲಿ ರೈತರಿಗಾಗಿ ಸರ್ಕಾರ ಸೂಕ್ತ ಕ್ರಮಗಳನ್ನು ರೂಪಿಸಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸುತ್ತಿದ್ದಂತೆ, ಕಿಡಿಕಾರಿದ ರಾಜನಾಥ್ ಸಿಂಗ್, “ರೈತರ ಸಮಸ್ಯೆ ಇಂದು, ನಿನ್ನೆ ಅಥವಾ ನಾಲ್ಕು ವರ್ಷಗಳ ಹಿಂದಿನದಲ್ಲ. ದೀರ್ಘಕಾಲ ದೇಶವನ್ನಾಳಿದ ಪಕ್ಷವೇ ಈ ಎಲ್ಲ ಸಮಸ್ಯೆಗಳಿಗೆ ಹೊಣೆ” ಎಂದರು.
“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಅವಧಿಯ ಆಡಳಿತದಲ್ಲಿ ರೈತರ ಆದಾಯ ಹೆಚ್ಚಳ ಹಾಗೂ ಆದಾಯ ದ್ವಿಗುಣಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಎನ್ ಡಿಎ ಸರ್ಕಾರದಂತೆ ಬೇರಾವುದೇ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿಲ್ಲ” ಎಂದು ಸಮರ್ಥಿಸಿಕೊಂಡರು.
ಶೂನ್ಯವೇಳೆಯಲ್ಲಿ ರೈತರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ರಾಹುಲ್, ದೇಶಾದ್ಯಂತ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿವೆ ಎಂದರು.
“ಸಾಲದ ಹೊರೆಯಿಂದಾಗಿ ಕೇರಳದ ವಯನಾಡ್ ನಲ್ಲಿ ಬುಧವಾರ ರೈತರೊಬ್ಬರ ಆತ್ಮಹತ್ಯೆಯಾಗಿದೆ. 8 ಸಾವಿರ ಸಾಲ ಹಿಂದಿರುಗಿಸುವಂತೆ ಬ್ಯಾಂಕ್ ನೋಟಿಸ್ ನೀಡಿದ್ದೇ ದುರಂತಕ್ಕೆ ಕಾರಣ. ರೈತರ ಸುಧಾರಣೆಗಾಗಿ ಕೇಂದ್ರ ದೃಢವಾದ ಕ್ರಮಗಳನ್ನು ಕೈಗೊಂಡಿಲ್ಲ” ಎಂದು ಹೇಳಿದರು.
ಆದರೆ ಇದನ್ನೊಪ್ಪದ ರಾಜನಾಥ್ ಸಿಂಗ್, ರೈತರು ಹೊಂದಿರುವ ಜಮೀನನ್ನು ಲೆಕ್ಕಿಸದೆ ಪ್ರತಿಯೊಬ್ಬರಿಗೂ ವರ್ಷಕ್ಕೆ 6 ಸಾವಿರ ರೂ. ನೆರವು ನೀಡಲಾಗುತ್ತಿದೆ. ರೈತರ ಆದಾಯದಲ್ಲಿ ಶೇ 20 ರಿಂದ 25ರಷ್ಟು ಹೆಚ್ಚಳ ಕಂಡುಬಂದಿದೆ ಎಂದು ಆಂತರಿಕ ವರದಿಗಳು ಮಾಹಿತಿ ನೀಡಿವೆ. ಅಲ್ಲದೆ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಬಳಿಕ ಇಲ್ಲಿಯವರೆಗೆ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ ಎಂದು ತಿಳಿಸಿದರು.
ಯುಎನ್ಐ ಎಸ್ಎ ವಿಎನ್ 1531
More News
ಗುಜರಾತಿಗಳೆಂಬ ಕಾರಣಕ್ಕೆ ಅಂಬಾನಿ ಮತ್ತು ಅದಾನಿ ಟಾರ್ಗೆಟ್‌ : ಸಚಿವ ರುಪಾಲ

ಗುಜರಾತಿಗಳೆಂಬ ಕಾರಣಕ್ಕೆ ಅಂಬಾನಿ ಮತ್ತು ಅದಾನಿ ಟಾರ್ಗೆಟ್‌ : ಸಚಿವ ರುಪಾಲ

19 Jul 2019 | 8:48 PM

ನವದೆಹಲಿ, ಜುಲೈ 19 (ಯುಎನ್‌ಐ) ರಾಜ್ಯಸಭೆಯಲ್ಲಿ ಖಾಸಗಿ ಸದಸ್ಯರ ಮಸೂದೆಗೆ ಉತ್ತರಿಸುವಾಗ ರಫೆಲ್‌, ಅಂಬಾನಿ ಮತ್ತು ಅದಾನಿ ಅವರ ಹೆಸರಿನ ಪ್ರಸ್ತಾಪಕ್ಕೆ ಕೃಷಿ ಖಾತೆ ರಾಜ್ಯ ಸಚಿವ ಪುರುಷೋತ್ತಮ್ ರೂಪಾಲಾ ಶುಕ್ರವಾರ ಆಕ್ಷೇಪಿಸಿದರು.

 Sharesee more..
ಕೇಂದ್ರ ಸಚಿವ ಬಲಿಯಾನ್ ಗೆ  ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಎಚ್ಚರಿಕೆ

ಕೇಂದ್ರ ಸಚಿವ ಬಲಿಯಾನ್ ಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಎಚ್ಚರಿಕೆ

19 Jul 2019 | 8:41 PM

ನವದೆಹಲಿ, ಜುಲೈ 19( ಯುಎನ್ಐ) ಸಂಸತ್ತಿನ ಕಲಾಪದಲ್ಲಿ ಹಾಜರಾಗದೆ ಸಮಯ ವ್ಯರ್ಥ ಗೊಳಿಸಿದ್ದಕ್ಕಾಗಿ ಕೇಂದ್ರ ಪಶುಸಂಗೋಪನಾ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಸಂಜೀವ್ ಕುಮಾರ್ ಬಲಿಯಾನ್ ವಿರುದ್ಧ ಉಪರಾಷ್ಟ್ರಪತಿಯೂ ಆಗಿರುವ ರಾಜ್ಯಸಭಾ ಸಭಾಪತಿ ಎಂ.

 Sharesee more..